ಅನಂತಕುಮಾರ್ ಹೆಗಡೆ ಹಿರಿತನಕ್ಕೆ ಸಂದ ಫಲ

ಈ ಸುದ್ದಿಯನ್ನು ಶೇರ್ ಮಾಡಿ

Anant-ku,ar--03

ಶಿರಸಿ, ಸೆ.3-ಅಚ್ಚರಿ ಎಂಬಂತೆ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿರುವ ಅನಂತಕುಮಾರ್ ಹೆಗಡೆ ಅವರ ಹಿರಿತನಕ್ಕೆ ಸಂದ ಫಲ ಇದಾಗಿದೆ. ಉತ್ತರ ಕನ್ನಡ ಕ್ಷೇತ್ರದಿಂದ ಐದು ಬಾರಿ ಲೋಕಸಭೆಗೆ ಚುನಾಯಿತರಾಗಿದ್ದಾರೆ. ಪ್ರಸುತ ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷರೂ ಆಗಿದ್ದಾರೆ.
ಆರ್‍ಎಸ್‍ಎಸ್ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಅವರು, 1990ರಲ್ಲಿ ಹಿಂದೂ ಜಾಗರಣಾ ವೇದಿಕೆಯ ಕೊಡಗು ಜಿಲ್ಲಾ ಸಂಚಾಲಕರಾಗಿ ನೇಮಕಗೊಂಡಿದ್ದರು. ನಂತರ ಅವರಿಗೆ ಉತ್ತರ ಕನ್ನಡ ಜಿಲ್ಲಾ ಸಂಚಾಲಕ ಸ್ಥಾನದ ಹೊಣೆ ವಹಿಸಲಾಯಿತು. ಅದೇ ಸಂದರ್ಭದಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ವಿವಾದ ಹೊಗೆಯಾಡುತ್ತಿತ್ತು. ಅಲ್ಲಿ ರಾಷ್ಟ್ರಧ್ವಜ ಹಾರಿಸಿ ಇಡೀ ರಾಜ್ಯದ ಗಮನಸೆಳೆದಿದ್ದರು ಹೆಗಡೆ. 1996ರ ಲೋಕಸಭಾ ಚುನಾವಣೆಯಲ್ಲಿ ಅಂದಿನ ಕೆನರಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅವರನ್ನು ಬಿಜೆಪಿ ಅಖಾಡಕ್ಕೆ ಇಳಿಸಿತ್ತು. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಆ ಕ್ಷೇತ್ರದಲ್ಲಿ ಹೆಗಡೆ ವಿಜಯಿಯಾದರು.

ಆಗಿನಿಂದ 1999ರ ಲೋಕಸಭಾ ಚುನಾವಣೆ ಹೊರತುಪಡಿಸಿ 1998, 2004, 2009 ಹಾಗೂ 2014ರ ಸಾರ್ವತ್ರಿಕ ಚುನಾವಣೆಗಳಲ್ಲಿ ಅವರು ಉತ್ತರ ಕನ್ನಡ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. 1999ರ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಅವರು ಹೆಗಡೆ ಅವರನ್ನು ಸೋಲಿಸಿದ್ದರು.

Facebook Comments

Sri Raghav

Admin