ಕೆಎಸ್‍ಆರ್‍ಟಿಸಿ ಬಸ್-ಆಟೋ ನಡುವೆ ಭೀಕರ ರಸ್ತೆ ಅಪಘಾತ : ಬೆಂಗಳೂರಿನ ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accidnet--01

ಮಾಗಡಿ, ಸೆ.3- ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಮತ್ತು ಅಪೆ ಆಟೋ ನಡುವೆ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕರನ್ನು ಬೆಂಗಳೂರಿನ ಮಾಗಡಿ ರಸ್ತೆಯ ಪರಮೇಶ್ (29) ಮತ್ತು ರಘು (22) ಎಂದು ಗುರುತಿಸಲಾಗಿದೆ.
ಬೆಂಗಳೂರು-ಮಾಗಡಿ ಹೆದ್ದಾರಿಯ ಜ್ಯೋತಿಪಾಳ್ಯದ ಬಳಿ ಹೊನ್ನಾಪುರ ಕೆರೆ ಏರಿ ಸಮೀಪ ಈ ಘಟನೆ ನಡೆದಿದ್ದು, ಇವರು ಮಾಗಡಿಯಿಂದ ತರಕಾರಿ ತುಂಬಿಕೊಂಡು ಬೆಂಗಳೂರಿಗೆ ಬರುತ್ತಿದ್ದರು.

Accidnet--02

ಈ ವೇಳೆ ಬೆಂಗಳೂರಿನಿಂದ ಹುಲಿಯೂರು ದುರ್ಗದ ಕಡೆ ಹೊರಟಿದ್ದ ಕೆಎಸ್‍ಆರ್‍ಟಿಸಿ ಬಸ್ ಬೆಳಗ್ಗೆ 7 ಗಂಟೆ ಸುಮಾರಿನಲ್ಲಿ ಅಪೆ ಆಟೋಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಟೋದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Accidnet--03

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin