ಗಾಜಿಯಾಬಾದ್‍ ನಲ್ಲಿ ಗುಂಡಿಟ್ಟು ಬಿಜೆಪಿ ನಾಯಕನ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

BJP-LEaDer-a-01

ಗಾಜಿಯಾಬಾದ್, ಸೆ.3-ಉತ್ತರಪ್ರದೇಶದ ಗಾಜಿಯಾಬಾದ್‍ನ ಖೋರಾ ಕಾಲೋನಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ಬಿಜೆಪಿ ನಾಯಕರೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಅವರ ಸ್ನೇಹಿತನಿಗೂ ತೀವ್ರ ಗಾಯಗಳಾಗಿವೆ. ಬಿಜೆಪಿ ನಾಯಕ ಗಜೇಂದ್ರ ಭಾಟೆ ಮತ್ತು ಅವರ ಗೆಳೆಯ ಬಲ್ಬೀರ್ ಸಿಂಗ್ ಚೌಹಾಣ್ ನಿನ್ನೆ ಅಪರಾಹ್ನ ಖೋರಾ ಕಾಲೋನಿಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಅರುಣ್‍ಕುಮಾರ್ ಸಿಂಗ್ ತಿಳಿಸಿದ್ದಾರೆ.

ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದ ಅವರಿಬ್ಬರನ್ನು ನೋಯ್ಡಾದ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಜೇಂಧ್ರ ಕೊನೆಯುಸಿರೆಳೆದರು. ಬಲ್ಬೀರ್ ಸಿಂಗ್ ಚೌಹಾಣ್ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಗಜೇಂದ್ರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆ ಬಳಿ ಜಮಾಯಿಸಿದ್ದರು. ಅಹಿತಕರ ಘಟನೆ ನಡೆಯದಂತೆ ಖೋರಾ ಕಾಲೋನಿಯಲ್ಲಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Facebook Comments

Sri Raghav

Admin