ಅನಂತ್‍ಕುಮಾರ್ ಹೆಗ್ಡೆಗೆ ಸಚಿವ ಸ್ಥಾನ ಸಿಕ್ಕಿರುವುದರಿಂದ ತುಂಬಾ ಖುಷಿಯಾಗಿದೆ : ಬಿಎಸ್ವೈ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-BJP

ಬೆಂಗಳೂರು, ಸೆ.3- ಸಂಸದ ಅನಂತ್‍ಕುಮಾರ್ ಹೆಗ್ಡೆ ಅವರಿಗೆ ಕೇಂದ್ರ ಸಚಿವ ಸ್ಥಾನ ನೀಡಿರುವುದು ತುಂಬಾ ಖುಷಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ರಾಜ್ಯಕ್ಕೆ ಹೆಚ್ಚಿನ ಅವಕಾಶಗಳು ಸಿಗುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟ ವಿಸ್ತರಣೆ ಮಾಡಿದ್ದು, ಕರ್ನಾಟಕಕ್ಕೂ ಸ್ಥಾನ ಕಲ್ಪಿಸಿದ್ದಾರೆ ಎಂದ ಅವರು, ರಾಜ್ಯವನ್ನು ಪ್ರತಿನಿಧಿಸುವ ನಿರ್ಮಲಾಸೀತಾರಾಮನ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಹೊಣೆ ಹೊತ್ತಿರುವ ಪಿಯೂಷ್ ಗೋಯಲ್ ಅವರಿಗೂ ಸಂಪುಟ ದರ್ಜೆ ಸಚಿವ ಸ್ಥಾನ ನೀಡಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಇದರಿಂದ ರಾಜ್ಯದಲ್ಲಿ ಪಕ್ಷವನ್ನು ಬಲಗೊಳಿಸಲು ಸಹಕಾರಿಯಾಗಲಿದೆ. ಇಂದು ಸಂಜೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಇಂದು ಬರಲಿದ್ದು, ನಾಳೆ ಪಿಯೂಷ್ ಗೋಯಲ್ ರಾಜ್ಯಕ್ಕೆ ಬರಲಿದ್ದಾರೆ.  ಪಕ್ಷದ ರಾಜಿಕೀಯ ವ್ಯವಹಾರಗಳ ಸಭೆ ಮತ್ತು ಕೋರ್‍ಕಮಿಟಿ ಸಭೆಯನ್ನು ನಡೆಸಿ ಪಕ್ಷವನ್ನು ಬಲಗೊಳಿಸಲು ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

Facebook Comments

Sri Raghav

Admin