ಸಚಿವಾಲಯ ಸಿಬ್ಬಂದಿಗೆ ದಿನಕ್ಕೆ 500ರೂ. ಅಧಿವೇಶನ ಭತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Vidhanasoudha--01

ಬೆಂಗಳೂರು, ಸೆ.3- ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನದ ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ಸರ್ಕಾರದ ಸಚಿವಾಲಯದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗೆ ಪ್ರತಿ ದಿನ 500ರೂ. ಗೌರವಧನ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ವಿಧಾನಸಭೆ ಮತ್ತು ವಿಧಾನಪರಿಷತ್‍ನ ಅಧಿವೇಶನಗಳು ನಡೆಯುವ ಸಮಯದಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಿತ್ಯ 500ರೂ. ಅಧಿವೇಶನ ಭತ್ಯೆ(ಗೌರವಧನ) ಮಂಜೂರು ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಲಿದೆ.

ರಾಜ್ಯ ಸರ್ಕಾರದ ಸಚಿವಾಲಯದ ನೌಕರರ ಸಂಘದ ಮನವಿ ಮೇರೆಗೆ ಈ ಆದೇಶ ಹೊರಡಿಸಲಾಗಿದೆ.  ಅಧಿವೇಶನ ಭತ್ಯೆ ಮಂಜೂರು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದರು. ಆದರೆ ಅಧಿವೇಶನ ನಡೆಯುವ ಸಂದರ್ಭದಲ್ಲಿ ಸಾರ್ವತ್ರಿಕ ರಜಾ ದಿನಗಳನಂದು ಈ ಭತ್ಯೆ ನೀಡುವುದಿಲ್ಲ.   ಅಧಿವೇಶನ ಸಂದರ್ಭದಲ್ಲಿ ಕಾರ್ಯದೊತ್ತಡದಿಂದ ಕೆಲಸ ಮಾಡಬೇಕಾಗಿರುವುದರಿಂದ ವಿಶೇಷ ಭತ್ಯೆ ನೀಡುವಂತೆ ಸಂಘ ಸರ್ಕಾರಕ್ಕೆ ಮನವಿ ಮಾಡಿತ್ತು. ವೇತನದ ಜತೆಗೆ ಹೆಚ್ಚುವರಿಯಾಗಿ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಭತ್ಯೆ ಪಡೆಯಲಿದ್ದಾರೆ.

Facebook Comments

Sri Raghav

Admin