ಸಿಎಂ ಜೊತೆ ಭಿನ್ನಾಭಿಪ್ರಾಯವಿಲ್ಲ, ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ : ಪರಮೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

Parameshwar

ಬೆಂಗಳೂರು, ಸೆ.3- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ರೀತಿಯ ಮನಸ್ತಾಪವೂ ಇಲ್ಲ, ಭಿನ್ನಾಭಿಪ್ರಾಯವೂ ಇಲ್ಲ. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಸ್ಪಷ್ಟಪಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಸಚಿವರ ಪ್ರಮಾಣ ವಚನ ಸಮಾರಂಭದಂದು ನನಗೆ ಜ್ವರ ಮತ್ತು ಕೆಮ್ಮು ಇದ್ದ ಕಾರಣ ಆ ಕಾರ್ಯಕ್ರಮಕ್ಕೆ ಗೈರು ಆಗಿದ್ದೇನೆಯೇ ಹೊರತು ಬೇರೆ ಯಾವುದೇ ಕಾರಣಕ್ಕಲ್ಲ ಎಂದರು.

ನಮ್ಮಿಬ್ಬರ ನಡುವೆ ಯಾವುದೇ ಶೀತಲ ಸಮರವೂ ಇಲ್ಲ, ಬಿಸಿ ಸಮರವೂ ಇಲ್ಲ. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯವಿದೆ ಎಂದು ಅಪಪ್ರಚಾರ ಮಾಡಿರುವುದರ ಹಿಂದೆ ಪ್ರತಿಪಕ್ಷಗಳ ಕೈವಾಡವಿದೆ ಎಂದು ಪರಮೇಶ್ವರ್ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನನ್ನು ಕೇಳದೆ ಏನನ್ನೂ ಮಾಡಿಲ್ಲ. ನಾವಿಬ್ಬರೂ ಸಮಾಲೋಚಿಸಿಯೇ ನಿರ್ಣಯ ಕೈಗೊಳ್ಳುತ್ತೇವೆ. ಮೊನ್ನೆ ನಡೆದ ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ನಾನು, ರಾಹುಲ್ ಗಾಂಧಿ, ಪಕ್ಷದ ಉಸ್ತುವಾರಿ ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲರೂ ಸೇರಿ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಂಡಿದ್ದೆವು.

ನಾವು ಕೆಲವರ ಹೆಸರನ್ನು ಸೂಚಿಸುತ್ತೇವೆ. ಅವರು ಕೆಲವರ ಹೆಸರನ್ನು ಸೂಚಿಸುತ್ತಾರೆ. ಆದರೆ, ಅಂತಿಮ ನಿರ್ಣಯ ಒಂದೇ ಆಗಿರುತ್ತದೆ. ಅದಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ. ಕಾಂಗ್ರೆಸ್‍ನಲ್ಲಿ ಹೈಕಮಾಂಡ್ ಇದೆ. ಆಂತರಿಕ ಸಂವಿಧಾನವಿದೆ. ಅದರಂತೆ ನಡೆಯುತ್ತೇವೆ. ನಾನು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಆರೂವರೆ ವರ್ಷದಿಂದ ಒಟ್ಟಿಗೆ ಕೆಲಸ ಮಾಡಿದ್ದೇವೆ. ಗೃಹ ಸಚಿವನಾಗಿಯೂ ಕೂಡ ಅವರೊಂದಿಗೆ ಕೆಲಸ ಮಾಡಿದ್ದೇನೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಪುನರುಚ್ಚರಿಸಿದರು.2018ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂಬುದು ನಮ್ಮ ಉದ್ದೇಶ. ಅದಕ್ಕೆ ಬದ್ಧರಾಗಿ ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಅಸಮಾಧಾನಗೊಂಡು ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಕೆಲವರು ಹಸಿ ಸುಳ್ಳು ಸುದ್ದಿ ಹಬ್ಬಿಸುತ್ತಾರೆ. ಅಂತಹ ಯಾವುದೇ ಪ್ರಮೇಯ ನಮ್ಮ ಮುಂದೆ ಇಲ್ಲ. ನಿನ್ನೆ ನೂತನ ಗೃಹ ಸಚಿವ ರಾಮಿಂಗಾರೆಡ್ಡಿಯವರು ನನ್ನನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದಾಗ ಕೋಮು ಶಕ್ತಿಗಳ ವಿರುದ್ಧ ಎಚ್ಚರದಿಂದ ಇರುವಂತೆ ಸಲಹೆ ನೀಡಿದ್ದೇನೆಯೇ ಹೊರತು ಕೆಂಪಯ್ಯನನ್ನು ಸಲಹೆಗಾರರ ಕೆಲಸದಿಂದ ತೆಗೆಯಬೇಕು ಎಂದು ಹೇಳಿಲ್ಲ ಎಂದು ಅವರು ತಿಳಿಸಿದರು.
ಚುನಾವಣಾ ಸಂದರ್ಭದಲ್ಲಿ ಬಿಜೆಪಿಯವರು ಕೋಮು ಸೌಹಾರ್ದ ಹಾಳು ಮಾಡುವಂತಹ ಕೆಲಸ ಮಾಡುತ್ತಾರೆ. ಇಂತಹವರ ವಿರುದ್ಧ ಎಚ್ಚರದಿಂದ ಇರಬೇಕಾಗುತ್ತದೆ. ಗುಪ್ತಚರ ಇಲಾಖೆಯನ್ನು ಚುರುಕುಗೊಳಿಸಬೇಕು. ರಾಜಕೀಯ ಸಂಚು ನಡೆಸುವವರನ್ನು ಎದುರಿಸಬೇಕು ಎಂಬ ಸಲಹೆ ನೀಡಿದ್ದೇನೆ ಎಂದು ಹೇಳಿದರು. ನಮ್ಮಲ್ಲಿ ಎಡ-ಬಲ ಯಾವುದೂ ಇಲ್ಲ. ಪಕ್ಷದ ಸಂವಿಧಾನ, ಹೈಕಮಾಂಡ್ ಆದೇಶಕ್ಕೆ ಬದ್ಧರಾಗಿ ಕೆಲಸ ಮಾಡುವುದು ನಮ್ಮ ಕರ್ತವ್ಯ. ಪಕ್ಷಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದು ಹಲವರು ಹೇಳುತ್ತಾರೆ. ಅದರಲ್ಲೆಲ್ಲ ನನಗೆ ನಂಬಿಕೆ ಇಲ್ಲ. ಪಕ್ಷದ ಉನ್ನತಿಗಾಗಿ ತಾಳ್ಮೆಯಿಂದ ಕೆಲಸ ಮಾಡುತ್ತೇನೆ. ಇಂದೂ ಮಾಡುತ್ತೇನೆ, ಮುಂದೆಯೂ ಮಾಡುತ್ತೇನೆ. ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಮುಂದಿರುವ ಗುರಿ ಎಂದು ಪರಮೇಶ್ವರ್ ಹೇಳಿದರು.
ಕೇಂದ್ರ ಸಂಪುಟ ವಿಸ್ತರಣೆಗೆ ಅಸಮಾಧಾನ:

Facebook Comments

Sri Raghav

Admin