ಉದ್ಯಮಿ ನವೀನ್ ಜಿಂದಾಲ್‍ಗೆ ಜಾಮೀನು

ಈ ಸುದ್ದಿಯನ್ನು ಶೇರ್ ಮಾಡಿ

Naveen-Jindal

ನವದೆಹಲಿ, ಸೆ.4-ಮಧ್ಯಪ್ರದೇಶದಲ್ಲಿ ಕಲ್ಲಿದ್ದಲು ನಿಕ್ಷೇಪದ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉದ್ಯಮಿ ನವೀನ್ ಜಿಂದಾಲ್ ಮತ್ತು ಇತರರಿಗೆ ವಿಶೇಷ ನ್ಯಾಯಾಲಯವೊಂದು ಇಂದು ಜಾಮೀನು ಮಂಜೂರು ಮಾಡಿದೆ. ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಅವರು ತಲಾ ಒಂದು ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಖಾತರಿ ಜಾಮೀನಿನ ಮೇಲೆ ಆರೋಪಿಗಳಿಗೆ ಬೇಲ್ ಮಂಜೂರು ಮಾಡಿದರು. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ನಿಗದಿಗೊಳಿಸಲಾಗಿದೆ.

ಜಿಂದಾಲ್ ಅವರಲ್ಲದೇ, ಜಿಂದಾಲ್ ಸ್ಟೀಲ್ ಅಂಡ್ ಪವರ್ ಲಿಮಿಟೆಡ್ (ಜೆಎಸ್‍ಪಿಎಲ್) ಮಾಜಿ ನಿರ್ದೇಶಕ ಸುಶೀಲ್ ಮಾರೂ, ಮಾಜಿ ಉಪ ವ್ಯವಸ್ಥಾಪಕ ನಿರ್ದೇಶಕ ಆನಂದ್ ಗೋಯೆಲ್ ಮತ್ತು ಸಿಇಒ ವಿಕ್ರಾಂತ್ ಗುಜ್ರಾಲ್ ಅವರಿಗೂ ಜಾಮೀನು ನೀಡಲಾಗಿದೆ. ಮಧ್ಯಪ್ರದೇಶದಲ್ಲಿ ಅಟ್ರನ್ ನಾರ್ತ್ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ವಂಚನೆ ಮತ್ತು ಕ್ರಿಮಿನಲ್ ಪಿತೂರಿ ನಡೆಸಲಾಗಿದೆ ಎಂಬ ಆರೋಪಗಳ ಮೇಲೆ ಇವರ ವಿರುದ್ದ ಪ್ರಕರಣಗಳು ದಾಖಲಾಗಿದ್ದವು.

Facebook Comments

Sri Raghav

Admin