ಊಹಾಪೋಹ ಸೃಷ್ಟಿಸುವುದೇ ಬಿಜೆಪಿ ಕೆಲಸ : ಗೃಹ ಸಚಿವ ರಾಮಲಿಂಗಾರೆಡ್ಡಿ

ಈ ಸುದ್ದಿಯನ್ನು ಶೇರ್ ಮಾಡಿ

ramalinga

ಬೆಂಗಳೂರು, ಸೆ.4-ಊಹಾಪೋಹ ಸೃಷ್ಟಿ ಮಾಡುವುದೇ ಬಿಜೆಪಿಯವರ ಕೆಲಸ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಬಿಜೆಪಿ ಜಾಥಾ ನಡೆಸುತ್ತಿದೆ. ಅಲ್ಲಿ ಶಾಂತಿ ನೆಲೆಸಲು ಕೈಗೊಳ್ಳಬೇಕಾದ ಸಿದ್ಧತೆ ಬಗ್ಗೆ ಅಧಿಕಾರಿಗಳ ಬಳಿ ಸಮಾಲೋಚನೆ ನಡೆಸಿ ಸೂಕ್ತ ಸೂಚನೆ ನೀಡಲಾಗುವುದು ಎಂದು ಹೇಳಿದರು.ಸಂಪುಟ ಸಭೆ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಂಗಳೂರಿನಲ್ಲಿ ಶಾಂತಿಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಬಗ್ಗೆ ಸಮಾಲೋಚಿಸುವುದಾಗಿ ಗೃಹ ಸಚಿವರು ತಿಳಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಜಾಥಾ ನಡೆಸಲು ಅವಕಾಶವಿದೆ. ಅದರಿಂದ ಸಮಾಜಕ್ಕೆ ಎಷ್ಟು ಪರಿಣಾಮ ಬೀರಲಿದೆ. ಅದರ ಅಗತ್ಯವೇನು ಎಂಬುದನ್ನು ಜಾಥಾ ನಡೆಸುವವರು ಹೇಳಬೇಕು. ಮಂಗಳೂರಿನಲ್ಲೀಗ ಶಾಂತಿ ನೆಲೆಸಿದೆ. ಅದನ್ನು ಹಾಳು ಮಾಡಲು ಬಿಜೆಪಿ ಮುಂದಾಗಿದ್ದು, ಮತ್ತೊಂದಷ್ಟು ಯುವಕರ ಬಲಿಗೆ ಅವರು ಸಜ್ಜಾಗಿದ್ದಾರೆ ಎಂದು ಯು.ಟಿ.ಖಾದರ್ ಆರೋಪಿಸಿದರು.

Facebook Comments

Sri Raghav

Admin