ದಸರಾದಲ್ಲಿ ಪ್ರಶಸ್ತಿ ವಿಜೇತ ಸಿನಿಮಾಗಳ ಪ್ರದರ್ಶನ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಸೆ.04- ಈ ಬಾರಿಯ ದಸರಾ ಮಹೋತ್ಸವದಲ್ಲಿ ಜನಪ್ರಿಯ ಚಲನಚಿತ್ರಗಳು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕøತ ಚಲನಚಿತ್ರ ಹಾಗೂ ದೇಶ- ವಿದೇಶದ ಸಿನಿಮಾಗಳನ್ನು ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುವುದು ಎಂದು ಜಿಲ್ಲಾಧಿಕಾರಿ ರಂದೀಪ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಇದೇ ಮೊದಲ ಬಾರಿಗೆ ಮಲ್ಟಿಪ್ಲೆಕ್ಸ್ ಚಿತ್ರಮಂದಿರದಲ್ಲಿ ದಿನಪೂರ್ತಿ ಪ್ರದರ್ಶನಗೊಳ್ಳಲಿದ್ದು, ಐನಾಕ್ಸ್, ಡಿ.ಆರ್.ಸಿ ಮಲ್ಟಿಪ್ಲೆಕ್ಸ್‍ಗಳಲ್ಲಿ ತಲಾ ಒಂದೊಂದು ಪರದೆಯಲ್ಲಿ ನಾಲ್ಕು ಪ್ರದರ್ಶನಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ಇದೇ ಮೊದಲ ಬಾರಿಗೆ ದಸರಾ ಚಲನಚಿತ್ರೋತ್ಸವಕ್ಕಾಗಿ ಲಾಂಛನವನ್ನು ಬಿಡುಗಡೆ ಮಾಡಲಾಗಿದೆ. ಸೆ.21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಲನಚಿತ್ರೋತ್ಸವವನ್ನು ಉದ್ಘಾಟಿಸಲಿದ್ದು, ಚಲನಚಿತ್ರದ ನಟ-ನಟಿಯರು ಚಿತ್ರೋತ್ಸವದಲ್ಲಿ ಪಾಲ್ಗೊಳಲಿದ್ದಾರೆ ಎಂದು ತಿಳಿಸಿದರು. ಸೆ.22ರಿಂದ 28ರವರೆಗೆ ನಡೆಯುವ ದಸರಾ ಚಲನಚಿತ್ರೋತ್ಸವದಲ್ಲಿ ಡಿ.ಆರ್.ಸಿ ಚಿತ್ರಮಂದಿರದಲ್ಲಿ 28 ಚಲನಚಿತ್ರಗಳು, ಐನಾಕ್ಸ್‍ನಲ್ಲಿ ಕನ್ನಡ ಚಲನಚಿತ್ರ ಹಾಗೂ ವಿವಿಧ ಭಾಷೆ, ದೇಶಗಳ ಚಲನಚಿತ್ರ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.

ಈ ಬಾರಿ ವಿಶೇಷವಾಗಿ ಕಾರಾಗೃಹದಲ್ಲಿರುವ ಕೈದಿಗಳಿಗಾಗಿ 2 ಚಲನಚಿತ್ರಗಳನ್ನು ಜೈಲಿನಲ್ಲಿಯೇ ಪ್ರದರ್ಶಿಸಲು ತೀರ್ಮಾನಿಸಲಾಗಿದೆ ಎಂದರು. ಐನಾಕ್ಸ್ ಚಿತ್ರಮಂದಿರದಲ್ಲಿ ಪ್ರದರ್ಶನವಾಗುವ ಚಿತ್ರಗಳಿಗೆ ನೊಂದಣಿಯ ಅಗತ್ಯವಿದ್ದು, ಸೆ.15ರಿಂದ ನೊಂದಣಿ ಆರಂಭಿಸಲಾಗುವುದು. ಐನಾಕ್ಸ್ ಚಿತ್ರಮಂದಿರಗಳಲ್ಲಿ

Facebook Comments

Sri Raghav

Admin