ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ನಲ್ಲಿ ಇಬ್ಬರು ಲಷ್ಕರ್ ಉಗ್ರರು ಎನ್‍ಕೌಂಟರ್

ಈ ಸುದ್ದಿಯನ್ನು ಶೇರ್ ಮಾಡಿ

fIRING--NAXALA

ಶ್ರೀನಗರ, ಸೆ.4-ಕಾಶ್ಮೀರ ಕಣಿವೆಯಲ್ಲಿ ಮುಂದುವರಿದಿರುವ ಭಯೋತ್ಪಾದಕರ ಅಟ್ಟಹಾಸವನ್ನು ಮಟ್ಟ ಹಾಕಲು ಯೋಧರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದಲ್ಲಿ ಭದ್ರತಾಪಡೆಗಳ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೈಬಾದ (ಎಲ್‍ಇಟಿ) ಇಬ್ಬರು ಉಗ್ರರು ಹತರಾಗಿದ್ದು ಅಪಾರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉತ್ತರ ಕಾಶ್ಮೀರದ ಸೋಪೋರ್‍ನ ಶಂಕರ್ ಗುಂದ್ ಬ್ರಾತ್ ಪ್ರದೇಶದಲ್ಲಿ ಉಗ್ರರಿದ್ದಾರೆಂಬ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದವು. ಆಗ ಮರೆಯಲ್ಲಿ ಅಡಗಿದ್ದ ಭಯೋತ್ಪಾದಕರು ಹಠಾತ್ ದಾಳಿ ಮಾಡಿದರು. ಯೋಧರ ಪ್ರತಿದಾಳಿ, ನಡೆದ ಗುಂಡಿನ ಚಕಮಕಿಯಲ್ಲಿ ಎಲ್‍ಇಟಿ ಉಗ್ರರಿಬ್ಬರು ಹತರಾದರು.

ಮೃತ ಭಯೋತ್ಪಾದಕರಿಂದ ಎ.ಕೆ.ರೈಫಲ್‍ಗಳು, ಪಿಸ್ತೂಲ್‍ಗಳು, ಗ್ರೆನೇಡ್, ಸ್ಫೋಟಕ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು ಸೇನಾ ಪಡೆ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ.  ಆ ಪ್ರದೇಶದಲ್ಲಿ ಇರಬಹುದಾದ ಇತರ ಉಗ್ರರಿಗಾಗಿ ಬೇಟೆ ಕಾರ್ಯಾಚರಣೆ ಮುಂದುವರಿದಿದೆ.

Facebook Comments

Sri Raghav

Admin