ಸರ್ಕಾರಿ ನೌಕರರ ಬಡ್ತಿ ಮಿಸಲಾತಿ ಕುರಿತ ನಿಲುವು ತಿಳಿಸಲು ಕಾಲಾವಕಾಶ ಕೋರಿ ಸುಪ್ರೀಂಗೆ ಅರ್ಜಿ

ಈ ಸುದ್ದಿಯನ್ನು ಶೇರ್ ಮಾಡಿ

supreme-ocurtಬೆಂಗಳೂರು,ಸೆ.4- ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿಲುವನ್ನು ತಿಳಿಸಲು ಸುಪ್ರೀಂಕೋರ್ಟ್‍ನಲ್ಲಿ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಲಾಗಿದೆ. ಜೊತೆಗೆ ತೀರ್ಪನ್ನು ಪುನರ್ ಪರಿಶೀಲಿಸುವಂತೆಯೂ ಕೋರಲಾಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ್ತಿ ಮೀಸಲಾತಿಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತರಲುದ್ದೇಶಿಸಿರುವ ಸುಗ್ರೀವಾಜ್ಞೆ ಜರೂರು ಅಥವಾ ಅಗತ್ಯವನ್ನು ರಾಜಪಾಲ ವಿ.ಆರ್. ವಾಲಾ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಪ್ರಸ್ತುತ ಅಧಿವೇಶನ ನಡೆಯದೆ ಇರುವುದರಿಂದ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡುವಂತೆ ಮನವೊಲಿಸಲಾಗಿದೆ ಎಂದರು.

ರಾಜಪಾಲರು ಕೂಡ ಕಾನೂನು ಸಲಹೆ ಪಡೆದು ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಹೇಳಿದರು. ಎಸ್ಸಿ-ಎಸ್ಟಿ ನೌಕರರ ಹಿತ ಕಾಪಾಡಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಿದ್ದು , ಅದನ್ನು ಅವರು ವಾಪಸ್ ಕಳುಹಿಸಿದ್ದರು. ಸುಗ್ರೀವಾಜ್ಞೆಗೆ ಸಂಬಂಧಪಟ್ಟಂತೆ ವಿಶೇಷ ಅಧಿವೇಶನ ಕರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.  ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿರ್ದೇಶನದಂತೆ ಸಮಿತಿಯನ್ನು ರಚಿಸಿರುವುದಾಗಿ ಸಚಿವರ ಸಮರ್ಥಿಸಿಕೊಂಡರು.

ನ್ಯಾಯಮೂರ್ತಿ ನಾಗಮೋಹನ್‍ದಾಸ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವುದಾಗಿ ಹೇಳಿದರು.  ರಾಜ್ಯದ ಬಹುತೇಕ ಆಸ್ಪತ್ರೆಗಳಲ್ಲಿ ಚಿಕುನ್‍ಗುನ್ಯ, ಡೆಂಘೀ ಹಾಗೂ ವೈರಾಣುಜ್ವರ ಪೀಡಿತರು ಸಾಲಾಗಿ ನಿಂತಿರುವ ದೃಶ್ಯಗಳು ಸಾಮಾನ್ಯವಾಗಿದೆ. ಆದರೆ ಮಲೇರಿಯಾ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದರು.  ರಕ್ತದಲ್ಲಿ ಪ್ಲೇಟ್‍ಲೆಟ್‍ಗಳ ಸಂಖ್ಯೆ ಕಡಿಮೆಯಾದ ತಕ್ಷಣ ಭಯಭೀತರಾಗುವುದರಿಂದ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮನೆಗಳ ಸುತ್ತಮುತ್ತಲಿನ ನೀರಿನಲ್ಲಿ ಚಿಕನ್‍ಗುನ್ಯ ಹಾಗೂ ಡೆಂಘೀಜ್ವರ ಹರಡುವ ಸೊಳ್ಳೆಯು ಉತ್ಪತ್ತಿಯಾಗುತ್ತಿದ್ದು ಇವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.

Facebook Comments

Sri Raghav

Admin