ಡಿವೈಎಸ್ಪಿ ಗಣಪತಿ ಪ್ರಕರಣ ಸಿಬಿಐಗೆ : ರಾಜೀನಾಮೆ ಕೊಡಲ್ಲ ಎಂದ ಜಾರ್ಜ್

Ganapati

ನವದೆಹಲಿ. ಸೆ.05 : ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಅಸಹಜ ಸಾವು ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ವಹಿಸಿದ್ದು, ಮೂರು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ನ್ಯಾ, ಉದಯ ಲಲಿತ್, ನ್ಯಾ ಆದರ್ಶಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ಸೂಚಿಸಿದೆ.  ಕಳೆ ವರ್ಷ ಅಂದರೆ 2016 ಜುಲೈ 7 ರಂದು ಡಿವೈಎಸ್ಪಿ ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವನ್ನು ನೀಡಿದ್ದರು ಈ ವೇಳೆ ಅವರು, ಮುಂದೆ ನನಗೆ ಏನಾದ್ರೂ ಆದರೆ ಅದಕ್ಕೆ ಸಚಿವ ಕೆಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಅಶಿತ್ ಮೋಹನ್ ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಕಾರಣ ಎಂದು ನೇರವಾಗಿ ಆರೋಪಿಸಿದ್ದರು.

ಈ ಸಂದರ್ಶನ ನೀಡಿದ ಬಳಿಕ ಸಂಜೆ ಮಡಿಕೇರಿ ನಗರದ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ಸಚಿವ ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಬಿ ರಿಪೋರ್ಟ್ ಸಲ್ಲಿಸಿ ಕ್ಲೀನ್ ಚಿಟ್ ನೀಡಿತ್ತು, ಇದು ಗಣಪತಿಯ ಅವರ ಕುಟುಂಬಕ್ಕೆ ಆಘಾತವನ್ನು ಉಂಟು ಮಾಡಿತ್ತು.

ರಾಜಿನಾಮೆ ಕೊಡಲ್ಲ :

ಡಿವೈ ಎಸ್ ಪಿ ಗಣಪತಿಯವರ ಆತ್ಮಹತ್ಯೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮೂಲಕ ಮರುತನಿಖೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲೇ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಯಡಿಯೂರಪ್ಪ ಆಗ್ರಹಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಜಾರ್ಜ್ ಯಡಿಯೂರಪ್ಪ ಅವರು ರಾಜಿನಾಮೆ ನೀಡು ಅಂದ ಕೂಡಲೇ ನಾನು ನನ್ನ ಮಂತ್ರಿ ಪದವಿಗೆ ರಾಜಿನಾಮೆ ಕೊಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಆದರೆ, ಸಿಬಿಐ ತನಿಖೆ ನಡೆಸಲಿದೆ ಎಂಬ ಕಾರಣಕ್ಕಾಗಿ ಸಚಿವ ಸ್ಥಾನ ತೊರೆಯಲು ಸಾಧ್ಯವಿಲ್ಲ. ಈ ಹಿಂದೆ, ಸಿಐಡಿಯು ಇದೇ ಪ್ರಕರಣದ ತನಿಖೆ ನಡೆಸುತ್ತಿದ್ದಾಗ ನಾನು ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತನಿಖೆಗೆ ಸಹಕರಿಸಿದ್ದೆ. ಈಗ ಮತ್ತೆ ರಾಜಿನಾಮೆ ಕೊಡುವ ಅಗತ್ಯವಿಲ್ಲ ಎಂದು ಅವರು ತಮ್ಮ ಮಾತನ್ನು ಸಮರ್ಥಿಸಿಕೊಂಡರು.

Facebook Comments

Sri Raghav

Admin