ಮಂಗಳೂರು ಚಲೋ : 800 ಮಂದಿ ಕಾರ್ಯಕರ್ತರು ಪೊಲೀಸರ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

PUR_8270

ಬೆಂಗಳೂರು,ಸೆ.5-ಬಿಜೆಪಿ ಹಮ್ಮಿಕೊಂಡಿದ್ದ ಮಂಗಳೂರು ಚಲೋ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ 800 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಹೇಳಿದರು.  ತಮ್ಮ ನಿವಾಸದಲ್ಲಿ ಪೊಲೀಸ್ ಮಹಾನಿರ್ದೇಶಕ ರೂಪ್‍ಕುಮಾರ್ ದತ್ತ ಅವರೊಂದಿಗೆ ಮಂಗಳೂರು ಚಲೋ ಸಂಬಂಧ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ 800 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿ ಕದಡುವ ಮೂಲಕ ಸರ್ಕಾರಕ್ಕೆ ಕೆಟ್ಟ ಹೆಸರು ತರುವಂತಹ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಇದನ್ನು ಸಹಿಸಿಕೊಂಡು ಸುಮ್ಮನಿರುವುದಿಲ್ಲ. ಸಣ್ಣ ಸಮಾರಂಭ ಮಾಡಿದರೆ ಪೊಲೀಸರ ಅನುಮತಿ ಪಡೆಯಬೇಕು. 300 ಕಿ.ಮೀ ರ್ಯಾಲಿ ನಡೆಸುವ ಸಂದರ್ಭದಲ್ಲಿ ಯಾವುದೇ ಪೂರ್ವಾನುಮತಿ ಪಡೆಯದಿದ್ದರೆ ಹೇಗೆ? ಎಂದು ಸಚಿವರು ಹೇಳಿದರು.

Facebook Comments

Sri Raghav

Admin