ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ : ಪಾಕ್ ರಾಯಭಾರಿಗೆ ಸಮನ್ಸ್

ಈ ಸುದ್ದಿಯನ್ನು ಶೇರ್ ಮಾಡಿ

Border--1

ನವದೆಹಲಿ,ಸೆ.6-ಕಾಶ್ಮೀರದಲ್ಲಿ ಉಗ್ರರ ಕೃತ್ಯಗಳು ಹೆಚ್ಚುತ್ತಿರುವುದಕ್ಕೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿರುವ ಭಾರತ ಪಾಕಿಸ್ತಾನ ರಾಯಭಾರಿ ಅಧಿಕಾರಿಗೆ ಬುಧವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. ಕಳೆದ ತಿಂಗಳಷ್ಟೇ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ದಾಳಿ ನಡೆಸಿದ್ದ ಉಗ್ರರು 8 ಯೋಧರನ್ನು ಬಲಿಪಡೆದುಕೊಂಡಿದ್ದರು. ಉಗ್ರರ ಈ ಕೃತ್ಯಕ್ಕೆ ಪ್ರತಿಭಟನೆ ದಾಖಲಿಸಿರುವ ವಿದೇಶಾಂಗ ಸಚಿವಾಲಯ, ಭಾರತದ ವಿದೇಶಾಂಗ ಸಚಿವಾಲಯ ಪಾಕಿಸ್ತಾನದ ಉಪ ಹೈ ಕಮಿಷನರ್ ಸೈಯದ್ ಹೈದರ್ ಷಾಗೆ ಸಮನ್ಸ್ ಜಾರಿ ಮಾಡಿದೆ.

ಭಾರತ ಗಡಿ ನುಸುಳಿಸಿರುವ ಪಾಕಿಸ್ತಾನದ ಮೂಲಕ ಉಗ್ರ ಸಂಘಟನೆ ಆ.26ರಂದು ದಾಳಿ ನಡೆಸಿತ್ತು. ಇದಕ್ಕೆ ಭಾರತ ತೀವ್ರವಾಗಿ ಖಂಡನೆ ವ್ಯಕ್ತಪಡಿಸುತ್ತದೆ ಎಂದು ಸಮನ್ಸ್‍ನಲ್ಲಿ ತಿಳಿಸಲಾಗಿದೆ. ಅಲ್ಲದೆ, ಉಗ್ರರ ದಾಳಿ ಕುರಿತಂತೆ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ. ಸೇನೆ ನಡೆಸಿದ್ದ ಕಾರ್ಯಾಚರಣೆಯಲ್ಲಿ ಉಗ್ರರು ಹತರಾಗಿದ್ದು, ಉಗ್ರರ ಡಿಎನ್‍ಎ ಮಾದರಿಗಳನ್ನು ಸಂಗ್ರಹಿಸಡಲಾಗಿದೆ. ಪಾಕಿಸ್ತಾನ ಪ್ರಕರಣದ ತನಿಖೆ ಆರಂಭಿಸಿದ್ದೇ ಆದರೆ, ಡಿಎನ್‍ಎ ಮಾದರಿಗಳನ್ನು ಹಸ್ತಾಂತರಿಸಲಾಗುತ್ತದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

Facebook Comments

Sri Raghav

Admin