ಗಣ್ಯರಿಂದ ಗೌರಿ ಲಂಕೇಶ್ ಅಂತಿಮ ದರ್ಶನ

ಈ ಸುದ್ದಿಯನ್ನು ಶೇರ್ ಮಾಡಿ

Gouri-Lankesh--01

ಬೆಂಗಳೂರು, ಸೆ.6- ಗೌರಿ ಲಂಕೇಶ್ ಅವರ ಪಾರ್ಥೀವ ಶರೀರವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 5 ಗಂಟೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಸಚಿವರಾದ ಡಿ.ಕೆ.ಶಿವಕುಮಾರ್, ಯು.ಟಿ.ಖಾದರ್, ಉಮಾಶ್ರೀ, ರೋಷನ್‍ಬೇಗ್, ಶಾಸಕ ಜಮೀರ್ ಅಹಮ್ಮದ್ ಖಾನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕ ವಿಶುಕುಮಾರ್, ಚಿತ್ರಕಲಾ ಪರಿಷತ್‍ನ ಅಧ್ಯಕ್ಷ ಬಿ.ಎಲ್.ಶಂಕರ್, ನಟ ಪ್ರಕಾಶ್ ರೈ, ವಾಟಾಳ್ ನಾಗರಾಜ್ ಸೇರಿದಂತೆ ಅನೇಕ ಗಣ್ಯರು ಅಂತಿಮ ದರ್ಶನ ಪಡೆದು ತೀವ್ರ ಸಂತಾಪ ವ್ಯಕ್ತಪಡಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಸಾಹಿತಿಗಳು, ಪತ್ರಕರ್ತರು, ಪ್ರಗತಿಪರ ಚಿಂತಕರು ಗೌರಿ ಲಂಕೇಶ್ ಅವರ ಅಂತಿಮ ದರ್ಶನ ಪಡೆದರು.

Gouri-Lankesh--002

Gouri-Lankesh--03

Facebook Comments

Sri Raghav

Admin