ಗೌರಿ ಲಂಕೇಶ್ ಹತ್ಯೆ : ಸೋನಿಯಾ, ಸ್ಮತಿ ಇರಾನಿ, ರಾಹುಲ್ ಖಂಡನೆ

ಈ ಸುದ್ದಿಯನ್ನು ಶೇರ್ ಮಾಡಿ

Gauri-Lankesh--01

ನವದೆಹಲಿ, ಸೆ.6-ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವೆ ಸ್ಮತಿ ಇರಾನಿ ಖಂಡಿಸಿದ್ದಾರೆ. ಈ ಹತ್ಯೆ ಪ್ರಕರಣದ ಬಗ್ಗೆ ತ್ವರಿತ ತನಿಖೆ ನಡೆಯಬೇಕು ಎಂದು ಅವರು ಹೇಳಿದ್ದಾರೆ. ಗೌರಿ ಲಂಕೇಶ್ ಅವರ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಈ ಪ್ರಕರಣ ತ್ವರಿತ ವಿಚಾರಣೆ ನಡೆಯುತ್ತದೆ ಹಾಗೂ ನ್ಯಾಯ ದೊರೆಯುತ್ತದೆ ಎಂದು ನಾನು ಆಶಿಸುತ್ತೇನೆ ಎಂದು ಅವರು ಟ್ವೀಟರ್‍ನಲ್ಲಿ ಹೇಳಿದ್ದಾರೆ.

ಸೋನಿಯಾ, ರಾಹುಲ್ ಖಂಡನೆ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಹ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿದ್ದಾರೆ. ನಮ್ಮ ಸಮಾಜದಲ್ಲಿ ಅಸಹನೆ ಮತ್ತು ದ್ವೇಷ ಮತ್ತೆ ತಲೆ ಎತ್ತಿದೆ ಎಂಬುದಕ್ಕೆ ಇದೊಂದು ಎಚ್ಚರಿಕೆ ಘಟನೆಯಾಗಿದೆ ಎಂದು ಸೋನಿಯಾ ಆತಂಕ ವ್ಯಕ್ತಪಡಿಸಿದ್ದಾರೆ. ಸತ್ಯ ಯಾವತ್ತೂ ನಿಶ್ಯಬ್ಧವಾಗಿರುವುದಿಲ್ಲ. ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ರಾಹುಲ್ ಟ್ವೀಟ್‍ನಲ್ಲಿ ಹೇಳಿದ್ದಾರೆ.

Facebook Comments

Sri Raghav

Admin