ನೋಡಲ್ ಅಧಿಕಾರಿ ನೇಮಕಕ್ಕೆ ರಾಜ್ಯಗಳಿಗೆ ಸುಪ್ರೀಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Supreme_Court_of_India_-_Retouched

ನವದೆಹಲಿ, ಸೆ.6-ಗೋರಕ್ಷಕರಿಂದ ನಡೆಯುತ್ತಿ ರುವ ಹಿಂಸಾಚಾರವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲಿ ತಲಾ ಪೊಲೀಸ್ ಹಿರಿಯ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಇಂದು ನಿರ್ದೇಶನ ನೀಡಿದೆ.  ಗೋರಕ್ಷಣೆ ಸೋಗಿನಲ್ಲಿ ನಡೆಯುತ್ತಿರುವ ಘಟನೆಗಳನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ವಿವರಗಳ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಪ್ರತಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು ಸೂಚನೆ ನೀಡಿದೆ.

ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಎಲ್ಲ ರಾಜ್ಯ ಸರ್ಕಾರಗಳಿಗೆ ಸಂವಿಧಾನದ ವಿಧಿ ಅಡಿ ತಾನು ನೀಡಬಹುದಾದ ನಿರ್ದೇಶನಗಳ ಕುರಿತು ಪ್ರತಿಕ್ರಿಯಿಸುವಂತೆಯೂ ಕೇಂದ್ರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ. ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಘಟನೆಗಳನ್ನು ತಡೆಗಟ್ಟಲು ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡುವುದೂ ಸೇರಿದಂತೆ ವಿವಿಧ ಪರಿಹಾರಗಳನ್ನು
ಕೋರಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಪೀಠ ಈ ನಿರ್ದೇಶನಗಳನ್ನು ನೀಡಿದೆ.

Facebook Comments

Sri Raghav

Admin