ಮಹಾರಾಷ್ಟ್ರದಲ್ಲಿ ಗಣೇಶ ವಿಸರ್ಜನೆವೇಳೆ ಅವಘಢ : ಪೊಲೀಸ್ ಸೇರಿದಂತೆ 15 ಮಂದಿ ಸಾವು

Ganesh--01

ಮುಂಬೈ,ಸೆ.6- ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಅವಘಡಗಳಲ್ಲಿ ಮಹಾರಾಷ್ಟ್ರದಾದ್ಯಂತ ಕರ್ತವ್ಯನಿರತ ಪೊಲೀಸ್ ಸೇರಿದಂತೆ ಒಟ್ಟು 12 ಮಂದಿ ಸಾವನ್ನಪ್ಪಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಮನೆಯಲ್ಲಿ ಪ್ರತಿಷ್ಠಾಪಿಸಿದ್ದ ಸಾವಿರಾರು ಗಣೇಶ ಮೂರ್ತಿಗಳನ್ನು ನಿನ್ನೆ ವಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಸಂಭವಿಸಿರುವ ದುರಂತಗಳಲ್ಲಿ ಅಪ್ರಾಪ್ತ ಮಕ್ಕಳು ಹಾಗೂ ಕರ್ತವ್ಯನಿರತ ಪೊಲೀಸರು ಸೇರಿದಂತೆ ಒಟ್ಟು 15 ಮಂದಿ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದ್ರಯಾನಿ ನದಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುತ್ತಿದ್ದ ವೇಳೆ ನಾಲ್ಕು ಮಂದಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರೆ, ಔರಂಗಾಬಾದ್ ನಲ್ಲಿ ಸಂಭವಿಸಿದ ಅವಘಡಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಜಲ್‍ಗಾಂವ್ ನಲ್ಲಿ ಇಬ್ಬರು, ನಾಶಿಕ್ ಹಾಗೂ ಬೀಡ್‍ನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಪರೇಲ್‍ನ ಲಾಲ್‍ಬಾಗ್‍ನಲ್ಲಿ ಗಣೇಶನ ಉತ್ಸವದ ವೇಳೆ ಕರ್ತವ್ಯ ನಿರತರಾಗಿದ್ದ ಸಹಾಯಕ ಸಬ್‍ಇನ್‍ಸ್ಪೆಕ್ಟರ್ ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದಾರೆ. ಇದಲ್ಲದೆ, ಪುಣೆಯ ಇಂದ್ರಯಾನಿ ನದಿಯಲ್ಲಿ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಅಧಿಕಾರಿಗಳು ತೀವ್ರ ಹುಡುಕಾಟ ಆರಂಭಿಸಿದ್ದಾರೆ.

Facebook Comments

Sri Raghav

Admin