ವಿಧಾನ ಪರಿಷತ್ ಸದಸ್ಯರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Delhi-Protest--01

ಬೆಂಗಳೂರು, ಸೆ.6- ಶಿಕ್ಷಕರ, ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ರಾಜ್ಯ ಸರ್ಕಾರಿ ಅನುದಾನಿತ-ಅನುದಾನ ರಹಿತ ಶಿಕ್ಷಕರ, ಉಪನ್ಯಾಸಕರ, ಪ್ರಾಂಶುಪಾಲರ ಹಾಗೂ ಬೋಧಕೇತರ ಆಡಳಿತ ಮಂಡಳಿ ಒಕ್ಕೂಟದಡಿ ವಿದ್ಯಾರ್ಥಿಗಳ, ಶಿಕ್ಷಕರ ಹಾಗೂ ಸಿಬ್ಬಂದಿಗಳ ಜ್ವಲಂತ ಸಮಸ್ಯೆಗಳ ಈಡೇರಿಕೆಗೆ ಮತ್ತು ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಒತ್ತಾಯಿಸಿ ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಇರುವ ಮಹಾತ್ಮಗಾಂಧಿ ಪ್ರತಿಮೆ ಬಳಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಧರಣಿ ನಡೆಸಿ ಮುಖ್ಯಮಂತ್ರಿಗಳು ತಮ್ಮ ಅಧ್ಯಕ್ಷತೆಯಲ್ಲಿ ಸಭೆ ಕರೆದು ಬೇಡಿಕೆಗಳು ಮತ್ತು ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು.
ಒಕ್ಕೂಟದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಉಪಸಭಾಪತಿ ಮರಿತಿಬ್ಬೇಗೌಡ, ಮಾಜಿ ಸಚಿವ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ರಮೇಶ್‍ಬಾಬು, ಶ್ರೀಕಂಠೇಗೌಡ, ಅರುಣ್ ಶಹಪುರ್ ಸೇರಿದಂತೆ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಪ್ರೌಢಶಾಲಾ ಸಹ ಶಿಕ್ಷಕರ ವೇತನ ತಾರತಮ್ಯ ನಿವಾರಿಸಬೇಕು. ಸರ್ಕಾರಿ ಶಾಲಾ ಶಿಕ್ಷಕರಿಗೆ ನೀಡುತ್ತಿರುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನ ಮತ್ತು ಅನುದಾನ ರಹಿತ ಶಿಕ್ಷಕರಿಗೂ ನೀಡಬೇಕು. ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಬೇಕು. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಅನುಪಾತವನ್ನು 1:70ರಿಂದ 1:40ಕ್ಕೆ ಕಡಿಮೆಗೊಳಿಸಬೇಕು ಎಂಬ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧರಣಿ ಆರಂಭಿಸಿದ್ದಾರೆ.

Facebook Comments

Sri Raghav

Admin