ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ನಿಯಂತ್ರಣ ವಿಧೇಯಕ ಮೋದನೆಗಾಗಿ ವಿಶೇಷ ಅಧಿವೇಶನ

ಈ ಸುದ್ದಿಯನ್ನು ಶೇರ್ ಮಾಡಿ

Ramesh-Kumar-01

ಬೆಂಗಳೂರು,ಸೆ.7-ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ನಿಯಂತ್ರಣ ವಿಧೇಯಕದ ಬಗ್ಗೆ ಚರ್ಚಿಸಿ ಅನುಮೋದನೆ ಪಡೆಯುವ ಉದ್ದೇಶದಿಂದ ಈ ತಿಂಗಳ ಅಂತ್ಯದಲ್ಲಿ ಒಂದು ದಿನದ ವಿಶೇಷ ವಿಧಾನಮಂಡಲ ಅಧಿವೇಶನ ಕರೆಯುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‍ಕುಮಾರ್ ತಿಳಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ, ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ನಿಯಂತ್ರಣ ವಿಧೇಯಕಕ್ಕೆ ಸಂಬಂಧಿಸಿದಂತೆ ರಚಿತವಾಗಿರುವ ಸದನ ಸಮಿತಿ ಸಮಗ್ರವಾಗಿ ಪರಿಶೀಲನೆ ನಡೆಸಿದೆ. ವಿಧೇಯಕಕ್ಕೆ ವಿಧಾನಮಂಡಲದ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆಯುವ ಅಗತ್ಯವಿರುವುದರಿಂದ ಸೆಪ್ಟೆಂಬರ್ ಅಂತ್ಯದೊಳಗೆ ವಿಶೇಷ ಅಧಿವೇಶನ ಕರೆಯುವ ಬಗ್ಗೆ ಸಮಾಲೋಚನೆ ನಡೆಸುತ್ತಿರುವುದಾಗಿ ಹೇಳಿದರು.

ಯೂನಿವರ್ಸಲ್ ಹೆಲ್ತ್ ಕಾರ್ಡ್ ಯೋಜನೆ ಜಾರಿಗೆ ತರುವುದರಿಂದ ಉಂಟಾಗುವ ಆರ್ಥಿಕ ಹೊರೆ ಮತ್ತು ಅಗತ್ಯವಿರುವ ಔಷಧಿ ಇತರೆ ಸಾಮಾಗ್ರಿಗಳ ಲೆಕ್ಕಾಚಾರ ಮಾಡಲಾಗುತ್ತದೆ. ನವೆಂಬರ್ 1ರ ವೇಳೆಗೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮತ್ತು ಎಂಆರ್‍ಐ ಸೌಲಭ್ಯ ಕಲ್ಪಿಸಲಾಗುತ್ತದೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಕೇಂದ್ರ, ತುರ್ತು ನಿಗಾ ಘಟಕಗಳನ್ನು ಪ್ರಾರಂಭಿಸಲಾಗುವುದು ಎಂದರು.  ರೋಗಿಗಳಿಗೆ ಕಡಿಮೆ ದರದಲ್ಲಿ ಔಷಧಿ ದೊರೆಯಲಿ ಎಂಬ ಕಾರಣಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನೌಷಧಿ ಮಳಿಗೆಗಳನ್ನು ತೆರೆಯುವುದಾಗಿ ಹೇಳಿದರು.
ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಳ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Facebook Comments

Sri Raghav

Admin