ಗೌರಿ ಹತ್ಯೆ ಖಂಡಿಸಿ11ರಂದು ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Vatal-01

ಬೆಂಗಳೂರು, ಸೆ.7- ಗೌರಿ ಲಂಕೇಶ್ ಹತ್ಯೆ ಖಂಡಿಸಿ ಸೆ.11ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆ ಅಂಗವಾಗಿ ಅಂದು ಬೆಳಗ್ಗೆ 10 ಗಂಟೆಗೆ ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ರ್ಯಾಲಿ ಹಮ್ಮಿಕೊಳ್ಳುವ ಮೂಲಕ ಗೌರಿ ಲಂಕೇಶ್ ಹತ್ಯೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಈಗಾಗಲೇ ಹಲವು ಹತ್ಯೆಗಳು ನಡೆದಿವೆ. ಪ್ರಮುಖವಾಗಿ ವೈಚಾರಿಕೆಯ ನೆಲೆಯುಳ್ಳವರು ಹತ್ಯೆಯಾಗುತ್ತಿದ್ದಾರೆ. ಯಾವುದೇ ವ್ಯಕ್ತಿಗೆ ತನ್ನ ವೈಚಾರಿಕ ನಿಲುವನ್ನು ಪ್ರಕಟಗೊಳಿಸಲು ಸ್ವಾತಂತ್ರ್ಯವಿದೆ. ಪ್ರಜಾಪ್ರಭುತ್ವದಲ್ಲಿ ವೈಚಾರಿಕತೆ ಹತ್ಯೆಗೆ ಸರ್ಕಾರ ಅವಕಾಶ ನೀಡಬಾರದು. ಈ ಕುರಿತಂತೆ ಪೊಲೀಸ್ ಇಂಟೆಲಿಜೆನ್ಸ್‍ಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಇಂತಹ ಹತ್ಯೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ಒಂದು ತಿಂಗಳೊಳಗೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಬಂಧಿಸದಿದ್ದರೆ ಕನ್ನಡಪರ ಸಂಘಟನೆಗಳ ಸಹಕಾರದೊಂದಿಗೆ ಕನ್ನಡ ಒಕ್ಕೂಟ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು.  ಗೋಷ್ಠಿಯಲ್ಲಿ ಡಾ.ರಾಜ್‍ಕುಮಾರ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಶಿವರಾಮೇಗೌಡ, ಪ್ರವೀಣ್‍ಶೆಟ್ಟಿ, ಕೆ.ಆರ್.ಕುಮಾರ್, ಸುರೇಶ್‍ಗೌಡ, ಮಂಜುನಾಥ್ ಯಾದವ್ ಮುಂತಾದವರು ಉಪಸ್ಥಿತರಿದ್ದರು.

Facebook Comments

Sri Raghav

Admin