ಪರಿಷತ್ ಸದಸ್ಯರ ಅಹೋರಾತ್ರಿ ಧರಣಿ 2ನೇ ದಿನಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Parishat

ಬೆಂಗಳೂರು,ಸೆ.7-ಶಿಕ್ಷಕರ ಹಾಗೂ ಶಿಕ್ಷಣ ಕ್ಷೇತ್ರದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಧಾನಪರಿಷತ್ ಸದಸ್ಯರು ನಡೆಸುತ್ತಿರುವ ಅಹೋರಾತ್ರಿ ಧರಣಿ 2ನೇ ದಿನವಾದ ಇಂದು ಮುಂದುವರೆಯಿತು.  ವಿಕಾಸ ಸೌಧ ಮತ್ತು ವಿಧಾನಸೌಧದ ನಡುವೆ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ನಿನ್ನೆಯಿಂದಲೇ ವಿಧಾನ ಪರಿಷತ್ ಸದಸ್ಯರು ಧರಣಿ ಆರಂಭಿಸಿದ್ದಾರೆ. ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಮಾಜಿ ಸಚಿವ ಬಸವರಾಜ ಹೊರಟ್ಟಿ ಸೇರಿದಂತೆ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರಗಳನ್ನು ಪ್ರತಿನಿಧಿಸುವ ವಿಧಾನಪರಿಷತ್ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡಿದ್ದರು.

WhatsApp Image 2017-09-07 at 1.02.21 PM

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ , ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಧರಣಿನಿರತರನ್ನು ಭೇಟಿಯಾಗಿ ಮಾತುಕತೆ ನಡೆಸಿದರೂ ಫಲ ನೀಡಿಲ್ಲ. ನಿನ್ನೆ ರಾತ್ರಿ ಕೂಡ ವಿಧಾನಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಡಿದ ಬಸವರಾಜ್ ಹೊರಟ್ಟಿ , ರಾಜ್ಯ ಸರ್ಕಾರ ಶಿಕ್ಷಣ ಮತ್ತು ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವ ಬೇಡಿಕೆ ಈಡೇರಿಸದಿದ್ದರೆ ಸೆ.14ರಿಂದ ಎಲ್ಲ ಶಾಲಾಕಾಲೇಜು ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.

Facebook Comments

Sri Raghav

Admin