ಅತ್ಯಾಚಾರಕ್ಕೊಳಗಾದ ಯುವತಿ ಮನನೊಂದು ಆತ್ಮಹತ್ಯೆ

woman--tablet-suicide

ಕಲಬುರಗಿ, ಸೆ.8- ನೆರೆಮನೆಯವನಿಂದ ಅತ್ಯಾಚಾರಕ್ಕೊಳಗಾದ ಯುವತಿ ನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಕುಡಿದ ಅಮಲಿನಲ್ಲಿ ನೆರೆಮನೆಯಾತ 20 ವರ್ಷದ ಯುವತಿ ಮನೆಗೆ ನುಗ್ಗಿ ಆಕೆ ಮೇಲೆ ಅತ್ಯಾಚಾರ ನಡೆಸಿದ್ದ. ಇದರಿಂದ ಮನನೊಂದ ಯುವತಿ ಪೋಷಕರಿಗೆ ಹೇಳಲು ಹೆದರಿ ನಿನ್ನೆ ಸಂಜೆ ತಮ್ಮ ಜಮೀನಿಗೆ ತೆರಳಿ ಅಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಸುದ್ದಿ ಗ್ರಾಮದಲ್ಲಿ ಹರಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಶವವನ್ನು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಟುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

Sri Raghav

Admin