ಆರ್‍ಎಸ್‍ಎಸ್ ಕಾರ್ಯಕರ್ತರ ಸರಣಿ ಕೊಲೆ ಬಗ್ಗೆ ಮೌನವೇಕೆ..? ರಾಹುಲ್‍ಗೆ ತಿರುಗೇಟು

ಈ ಸುದ್ದಿಯನ್ನು ಶೇರ್ ಮಾಡಿ

Rahul--01

ನವದೆಹಲಿ, ಸೆ.8- ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಹಿರಿಯ ಪತ್ರಕರ್ತೆ ಮತ್ತು ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರಿಗೆ ಭದ್ರತೆ ನೀಡುವಲ್ಲಿ ರಾಜ್ಯಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಟೀಕಿಸಿದ್ದಾರೆ. ಗೌರಿ ಲಂಕೇಶ್ ಅವರಿಗೆ ಏಕೆ ಭದ್ರತೆ ಒದಗಿಸಿರಲಿಲ್ಲ ಎಂದು ಪ್ರಶ್ನಿಸಿದ ಅವರು, ಈ ಕುರಿತು ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಹೇಳಿಕೆಗಳು ಗೊಂದಲಗಳಿಂದ ಕೂಡಿದ್ದು, ಹಲವು ಅನು ಮಾನಗಳಿಗೆ ಎಡೆಮಾಡಿ ಕೊಡುತ್ತಿದೆ ಎಂದು ಆರೋಪಿಸಿದರು.

ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಆರ್‍ಎಸ್‍ಎಸ್ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‍ಗಾಂಧಿ ಮಾಡುತ್ತಿರುವ ಆರೋಪಗಳು ಆಧಾರ ರಹಿತ ಎಂದು ಸಚಿವರು ತಿರುಗೇಟು ನೀಡಿದರು. ಕೇರಳದಲ್ಲಿ ಹಲವು ಹಿಂದು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಆದರೆ, ರಾಜ್ಯದಲ್ಲಿ ನಡೆದ ಕೊಲೆ ಬಗ್ಗೆ ಒಂದು ಪಂಥದವರ ಮೇಲೆ ಆರೋಪಿಸುತ್ತಿರುವುದು ಸರಿಯಲ್ಲ ಎಂದು ಅವರು ಟೀಕಿಸಿದರು.

Facebook Comments

Sri Raghav

Admin