ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರ ಆರೋಗ್ಯದಲ್ಲಿ ವ್ಯತ್ಯಯ

ಈ ಸುದ್ದಿಯನ್ನು ಶೇರ್ ಮಾಡಿ

Asha--01

ಬೆಂಗಳೂರು, ಸೆ.8- ಆಶಾ ಕಾರ್ಯಕರ್ತೆಯರು ಮಳೆ-ಚಳಿಯಲ್ಲಿ ಪ್ರತಿಭಟನೆ ಮುಂದುವರಿಸಿದ್ದರಿಂದ ಹಾಗೂ ನಿದ್ರೆಯಿಲ್ಲದೆ ರಾತ್ರಿ ಕಳೆದಿದ್ದರಿಂದ ಹಲವು ಆಶಾ ಕಾರ್ಯಕರ್ತೆಯರ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ಪ್ರತಿಭಟನಾನಿರತ ಇಬ್ಬರು ಕಾರ್ಯಕರ್ತೆಯರು ಅಸ್ವಸ್ಥರಾಗಿದ್ದಾರೆ. ಬಳ್ಳಾರಿ ಮೂಲದ ನಾಗವೇಣಿ, ಕಲಬುರಗಿ ಮೂಲದ ಚಂದ್ರಕಲಾ ಅವರು ಹೊಟ್ಟೆನೋವಿನಿಂದ ಬಳಲುತ್ತಿದ್ದು, ಅವರನ್ನು 108 ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಸಮಾಜದ ಆರೋಗ್ಯ ಸ್ವಾಸ್ಥ್ಯ ಕಾಪಾಡುತ್ತಿದ್ದ ಆಶಾ ಕಾರ್ಯಕರ್ತೆಯರು ಈಗ ಅನಾರೋಗ್ಯಕ್ಕೀಡಾಗಿದ್ದಾರೆ.

Asha--03

ತಲೆನೋವು, ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿದ್ದು, ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಮಾತ್ರೆ, ಟಾನಿಕ್, ಇಂಜೆಕ್ಷನ್‍ಗಳನ್ನು ಆಶಾ ಕಾರ್ಯಕರ್ತೆಯರಿಗೆ ಸ್ಥಳದಲ್ಲಿ ನೀಡಲಾಗುತ್ತಿದೆ. ಬೆಳಗ್ಗೆ ಉಪಹಾರ ಪಡೆಯುವ ಸಂದರ್ಭದಲ್ಲಿ ಹಲವು ಆಶಾ ಕಾರ್ಯಕರ್ತೆಯರು ಅನಾರೋಗ್ಯದಿಂದ ಬಳಲುತ್ತಿರುವುದು ಕಂಡುಬಂತು. ಈ ಮಾಹಿತಿ ಆರೋಗ್ಯ ಇಲಾಖೆಗೆ ರವಾನೆಯಾಗುತ್ತಿದ್ದಂತೆ ಹಲವು ವೈದ್ಯರು ಸ್ಥಳಕ್ಕೆ ಆಗಮಿಸಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು.

Asha--02

ಇಂದು ಕೂಡ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರಿಸಲಿದ್ದಾರೆ. ರಾಜಧಾನಿಯ ವಾತಾವರಣಕ್ಕೆ ಒಗ್ಗಿಕೊಳ್ಳದ ಹಲವರು ಅನಾರೋಗ್ಯಕ್ಕೀಡಾಗಿದ್ದಾರೆ. ಸೊಳ್ಳೆಗಳ ಕಾಟ ವಿಪರೀತವಾಗಿರುವುದರಿಂದ ಡೆಂಘೀ ಹರಡಬಾರದೆಂಬ ಹಿನ್ನೆಲೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆಯುತ್ತಿದ್ದಾರೆ.

Asha--04

Facebook Comments

Sri Raghav

Admin