ಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಮೀಸಲಾತಿ ಪ್ರಕಟ

ಈ ಸುದ್ದಿಯನ್ನು ಶೇರ್ ಮಾಡಿ

BBMP--01

ಬೆಂಗಳೂರು, ಸೆ.8- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 18ನೇ ಅವಧಿಯ ಮಹಾಪೌರರು ಮತ್ತು ಉಪಮಹಾಪೌರರ ಸ್ಥಾನಗಳಿಗೆ ನಗರಾಭಿವೃದ್ಧಿ ಇಲಾಖೆ ಮೀಸಲಾತಿ ಪ್ರಕಟಿಸಿದೆ. ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೂ, ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆ ವರ್ಗಕ್ಕೆ ಮೀಸಲಾತಿ ನಿಗದಿ ಮಾಡಲಾಗಿದೆ. 20-10-2015ರ ಅಧಿಸೂಚನೆಯಂತೆ 18ನೇ ಅವಧಿಯ ಮೇಯರ್, ಉಪಮೇಯರ್ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಈ ಮೀಸಲಾತಿ ಪ್ರಕಾರ ಚುನಾವಣೆ ನಡೆಸುವಂತೆ ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿ ಆಯುಕ್ತರು ಮತ್ತು ಪ್ರಾದೇಶಿಕ ಆಯುಕ್ತರ ಕಚೇರಿಗೆ ಪತ್ರ ಬರೆದು ತಿಳಿಸಿದೆ.

Facebook Comments

Sri Raghav

Admin