ಮುಖ್ಯಮಂತ್ರಿ ಸಿದ್ದರಾಮಯ್ಯ ಆಧುನಿಕ ಭಗೀರಥ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ಬೆಂಗಳೂರು, ಸೆ.8- ತುಮಕೂರು ಜಿಲ್ಲೆಯ ಪಾವಗಡ ಹಾಗೂ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ ಸೇರಿದಂತೆ ಆರು ತಾಲೂಕುಗಳಿಗೆ ಕುಡಿಯುವ ನೀರು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು 2252.5 ಕೋಟಿ ರೂ. ಮಂಜೂರು ಮಾಡಿರುವ ಆಧುನಿಕ ಭಗೀರಥ ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ದಶಕಗಳಿಂದ ಪಾವಗಡದಲ್ಲಿ ಪ್ಲೊ ರೈಡ್ ಮಿಶ್ರಿತ ನೀರನ್ನು ಜನರು ಕುಡಿಯುತ್ತಿದ್ದರು. ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಕುಡಿಯುವ ನೀರನ್ನು ಒದಗಿಸುವ ಈ ಯೋಜನೆಗೆ ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ.

ಈಗಾಗಲೇ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದ್ದು, 2.3 ಟಿಎಂಸಿ ಅಡಿ ನೀರನ್ನು ಕುಡಿಯುವ ನೀರಿಗೆ ಬಳಸಿಕೊಳ್ಳಲಾಗುತ್ತಿದೆ. ಪಾವಗಡ, ಮೊಳಕಾಲ್ಮೂರು ಪಟ್ಟಣವಲ್ಲದೆ ಸಾವಿರಾರು ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು. ಆರು ತಾಲೂಕುಗಳಲ್ಲಿ ಎಸ್‍ಸಿ-ಎಸ್‍ಟಿ ಜನಸಂಖ್ಯೆ ಶೇ.50ಕ್ಕಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ ಆ ವರ್ಗಗಳಿಗೆ ಮೀಸಲಿಟ್ಟ ಹಣದಲ್ಲಿ 1091.30 ಕೋಟಿ ರೂ. ಬಳಸಿಕೊಳ್ಳಲಾಗುತ್ತಿದೆ. ಇದಕ್ಕೆ ಪರಿಷತ್‍ನಲ್ಲೂ ನಿರ್ಣಯ ಕೈಗೊಳ್ಳಲಾಗಿದೆ ಎಂದರು. ನಗರಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅನುದಾನ ದೊರೆಯಲಿದೆ. ಮುಂದಿನ ಒಂದೂವರೆ ವರ್ಷದಲ್ಲಿ ಕುಡಿಯುವ ನೀರಿನ ಯೋಜನೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಉಗ್ರಪ್ಪ ಹೇಳಿದರು.

Facebook Comments

Sri Raghav

Admin