ಐಬಿಪಿಎಸ್ ಪರೀಕ್ಷೆಯಲ್ಲಿ ಹೊರರಾಜ್ಯ ವಿದ್ಯಾರ್ಥಿಗಳಿಗೆ ಆದ್ಯತೆ, ಉಗ್ರರೂಪ ಪಡೆದ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Hubli--01

ಹುಬ್ಬಳ್ಳಿ,ಸೆ.9-ಇಲ್ಲಿ ನಡೆಯುತ್ತಿರುವ ಇನ್‍ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ( ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ-ಐಬಿಪಿಎಸ್) ಪರೀಕ್ಷೆಯಲ್ಲಿ ಹೊರರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಇದೀಗ ಉಗ್ರ ರೂಪ ಪಡೆದುಕೊಂಡಿದೆ. ವಿದ್ಯಾರ್ಥಿಯೊಬ್ಬ ತನ್ನ ಕೈ ಕೊಯ್ದುಕೊಂಡು ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಗಾಯಾಳು ಅಭ್ಯರ್ಥಿ ಸಲೀಂ ಎಂಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳನ್ನು ಕಡೆಗಣಿಸಿ ಹೊರರಾಜ್ಯದ ವಿದ್ಯಾರ್ಥಿಗಳಿಗೆ ಮಣೆ ಹಾಕಲಾಗುತ್ತದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.  ಈ ಪರೀಕ್ಷೆಯನ್ನು ತಕ್ಷಣ ನಿಲ್ಲಿಸಬೇಕು, ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಬೇಕು ಮತ್ತು ರಾಜ್ಯದ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಅವಕಾಶ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.  ಈ ಸಂದರ್ಭ ಪೊಲೀಸರು ಮತ್ತು ಪರೀಕ್ಷಾ ಅಭ್ಯರ್ಥಿಗಳ ನಡುವೆ ಸಾಕಷ್ಟು ವಾಗ್ವಾದಗಳು ನಡೆದಿವೆ.  ಅಭ್ಯರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಅಯುಕ್ತ ಎಂ.ಎನ್.ನಾಗರಾಜ್ ಪರಿಸ್ಥಿತಿ ಪರಿಶೀಲನೆ ಮಾಡಿದರು.

Facebook Comments

Sri Raghav

Admin