ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕೆ ಮುಕ್ತ ಮನಸ್ಸು : ರಾಜನಾಥ ಸಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

Rajanath Singh 01

ಶ್ರೀನಗರ, ಸೆ.9-ಕಣಿವೆ ರಾಜ್ಯ ಕಾಶ್ಮೀರ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಕಂಡಕೊಳ್ಳಲು ಮುಕ್ತ ಮನಸ್ಸು ಹೊಂದಿರುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರಕ್ಕೆ ನಾಲ್ಕು ದಿನಗಳ ಭೇಟಿಗಾಗಿ ಶ್ರೀನಗರಕ್ಕೆ ಆಗಮಿಸಿದ ಅವರು, ತಾವು ಇಲ್ಲಿಗೆ ಮುಕ್ತ ಮನಸ್ಸಿನಿಂದ ಬಂದಿದ್ದು, ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರಕ್ಕೆ ಸಹಕಾರ ನೀಡುವ ಪ್ರತಿಯೊಬ್ಬರನ್ನೂ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಗೃಹ ಸಚಿವರು ರಾಜ್ಯಪಾಲ ಎನ್.ಎನ್.ವೋರಾ, ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಸರ್ಕಾರದ ಉನ್ನತಾಧಿಕಾರಿಗಳನ್ನು ಸಹ ಭೇಟಿ ಮಾಡಲಿದ್ದಾರೆ.

Facebook Comments

Sri Raghav

Admin