ಪ್ಯಾರಿಸ್ ಒಪ್ಪಂದಕ್ಕೆ ಬದ್ಧವಾಗಿರಲು ವಿಶ್ವಸಂಸ್ಥೆ ಕರೆ

ಈ ಸುದ್ದಿಯನ್ನು ಶೇರ್ ಮಾಡಿ

Paris--01

ವಿಶ್ವಸಂಸ್ಥೆ, ಸೆ.9 – ಭಾರತ ಸೇರಿದಂತೆ ಏಷ್ಯಾ ದೇಶಗಳಲ್ಲಿ ಭಾರೀ ಪ್ರವಾಹದ ಭೀಕರ ಪರಿಸ್ಥಿತಿಯನ್ನು ಉಲ್ಲೇಖಿಸಿರುವ ವಿಶ್ವಸಂಸ್ಥೆ ಹಮಾಮಾನ ಬದಲಾವಣೆಯಿಂದ ಅಗಾಗ ಎದುರಾಗುತ್ತಿರುವ ಇಂತಹ ಅತಂಕಗಳನ್ನು ನಿಭಾಯಿಸಲು ಐಸಿಹಾಸಿಕ ಪ್ಯಾರಿಸ್ ಒಪ್ಪಂದಕ್ಕೆ ಬದ್ಧವಾಗಿರುವಂತೆ ಜಗತ್ತಿನ ರಾಷ್ಟ್ರಗಳಿಗೆ ಕರೆ ನೀಡಿದೆ.  ಭಾರತ, ನೇಪಾಳ ಮತ್ತು ಬಾಂಗ್ಲಾದೇಶದಲ್ಲಿ ನಿರಂತರ ಸುರಿದ ಭಾರೀ ಮಳೆ, ಪ್ರವಾಹ ಹಾಗೂ ಭೂಕುಸಿತದಿಂದ ಮಕ್ಕಳೂ ಸೇರಿದಂತೆ 16 ದಶಲಕ್ಷಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಲಕ್ಷಾಂತರ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ ಎಂದು ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಅಂಟೊನಿಯೋ ಗುಟೆರ್ರೆಸ್ ಹೇಳಿದ್ದಾರೆ.

ನೈಸರ್ಗಿಕ ವಿಕೋಪಗಳು ಮರುಕಳಿಸುತ್ತಾ ವಿನಾಶಕಾರಿಯಾಗಿ ಪರಿಣಮಿಸುತ್ತಿವೆ. ವಾತಾವರಣ ಬದಲಾವಣೆಯಿಂದ ಇಂಥ ಗಂಭೀರ ಸವಾಲುಗಳು ಎದುರಾಗುತ್ತಿವೆ. ಇಂಥ ಆತಂಕಕಾರಿ ಸನ್ನಿವೇಶಗಳನ್ನು ನಿಭಾಯಿಸಲು ಪ್ಯಾರಿಸ್ ಒಪ್ಪಂದಕ್ಕೆ ಎಲ್ಲ ದೇಶಗಳೂ ಬದ್ಧರಾಗಬೇಕು ಎಂದು ವಿಶ್ವಸಂಸ್ಥೆ ಮುಖ್ಯಸ್ಥರು ಸಲಹೆ ಮಾಡಿದ್ದಾರೆ.

Facebook Comments

Sri Raghav

Admin