ಬಿಬಿಎಂಪಿ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

ಈ ಸುದ್ದಿಯನ್ನು ಶೇರ್ ಮಾಡಿ

BBMP--01

ಬೆಂಗಳೂರು, ಸೆ.9- ಬಿಬಿಎಂಪಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಸೆ.28ರಂದು ಚುನಾವಣೆ ನಡೆಯಲಿದೆ. ಬಿಬಿಎಂಪಿ 51ನೇ ಮೇಯರ್ ಹಾಗೂ 50ನೇ ಉಪಮೇಯರ್ ಚುನಾವಣೆ ಇದೇ 28ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ. ಅಂದು ಕೇವಲ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯಲಿದ್ದು, 12 ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಚುನಾವಣೆ ನಡೆಯುವುದಿಲ್ಲ. ಏಕೆಂದರೆ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ಅವಧಿ ಅಕ್ಟೋರ್ ತಿಂಗಳಲ್ಲಿ ಮುಗಿಯಲಿದೆ. ಹಾಗಾಗಿ ಮತ್ತೊಂದು ದಿನ ಈ ಸ್ಥಾನಗಳಿಗೆ ಚುನಾವಣೆ ನಡೆಸಲು ಪ್ರಾದೇಶಿಕ ಆಯುಕ್ತರು ಬಿಬಿಎಂಪಿ ಕೌನ್ಸಿಲ್ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

Facebook Comments

Sri Raghav

Admin