ಬೆಂಗಳೂರಲ್ಲಿ ಕತ್ತುಕೊಯ್ದು ಮಹಿಳೆಯ ಭೀಕರ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Wife-Murder

ಬೆಂಗಳೂರು, ಸೆ.9-ಮಹಿಳೆಯೊಬ್ಬರ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಾಗಡಿರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ಹಾಡಹಗಲೇ ನಡೆದಿದೆ. ಇಂದು ಮಧ್ಯಾಹ್ನ ಈ ಮಹಿಳೆಯೊಂದಿಗೆ ಜಗಳವಾಡಿದ ವ್ಯಕ್ತಿಯೊಬ್ಬ ಚಾಕುವಿನಿಂದ ಆಕೆಯ ಕುತ್ತಿಗೆ ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸುದ್ದಿ ತಿಳಿದ ಮಾಗಡಿರಸ್ತೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗೃಹಿಣಿಯನ್ನು ಯಾವ ಕಾರಣಕ್ಕಾಗಿ ಯಾರು ಭೀಕರವಾಗಿ ಕೊಲೆ ಮಾಡಲಾಗಿದೆ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

Facebook Comments

Sri Raghav

Admin