ಮ್ಯಾನ್ಮಾರ್ ಹಿಂಸಾಚಾರ : 1,000 ದಾಟಿದ ಸತ್ತವರ ಸಂಖ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Mynmar--01

ಸಿಯೋಲ್, ಸೆ.9-ಮ್ಯಾನ್ಮಾರ್‍ನ ರಖೈನ್ ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಈವರೆಗೆ 1,000ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ಹಿರಿಯ ಪ್ರತಿನಿಧಿಯೊಬ್ಬರು ತಿಳಿಸಿದ್ದಾರೆ.  ಮೃತಪಟ್ಟವರಲ್ಲಿ ಬಹುತೇಕ ಮಂದಿ ರೋಹಿಂಗ್ಯ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂದು ವಿಶ್ವಸಂಸ್ಥೆಯ ವಿಶೇಷ ಮಾನವ ಹಕ್ಕುಗಳ ಪ್ರತಿನಿಧಿ ಯಾಂಘೀ ಲಿ ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಎಪಿಎಫ್ ವಾರ್ತಾ ಸಂಸ್ಥೆಗೆ ತಿಳಿಸಿದ್ದಾರೆ. ಇದು ಮ್ಯಾನ್ಮಾರ್ ಸರ್ಕಾರ ನೀಡಿರುವ ಸಾವಿನ ಸಂಖ್ಯೆಗಿಂತಲೂ ಎರಡು ಪಟ್ಟು ಹೆಚ್ಚಾಗಿದೆ.

Facebook Comments

Sri Raghav

Admin