ದೆಹಲಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಈ ಸುದ್ದಿಯನ್ನು ಶೇರ್ ಮಾಡಿ

Girl-Rape

ನವದೆಹಲಿ, ಸೆ.10-ದೇಶದ ವಿವಿಧೆಡೆ ಶಾಲಾ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದಿಂದ ವಿದ್ಯಾರ್ಥಿಗಳು, ಪೋಷಕರು ಕಂಗಾಲಾಗಿರುವಾಗಲೇ, ರಾಜಧಾನಿ ದೆಹಲಿಯ ಗಾಂಧಿನಗರದಲ್ಲಿ ಐದು ವರ್ಷದ ಬಾಲಕಿ ಮೇಲೆ ಜವಾನನೊಬ್ಬ ಶೌಚಾಲಯದಲ್ಲೇ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆ ನಡೆದಿದೆ. ಗುರುಗಾಂವ್‍ನಲ್ಲಿ ಶಾಲಾ ವಾಹನದ ನಿರ್ವಾಹಕನೊಬ್ಬ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ ಮಾಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ.

ಒಂದನೇ ತರಗತಿಯ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ ಬಳಿಕ ಜವಾನನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಶಾಲೆಯಲ್ಲಿ ಶಿಕ್ಷಕರಿಗೆ ಆಹಾರ ಸರಬರಾಜು ಮಾಡುತ್ತಿದ್ದ. ನಿನ್ನೆ ಮಧ್ಯಾಹ್ನ ಬಾಲಕಿಯು ಅಳುತ್ತ ಮನೆಗೆ ಬಂದಳು. ಈ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದು ಪೊಲೀಸರಿಗೆ ದೂರು ನೀಡಿದರು. ಶಾಲೆಯಲ್ಲಿ ಸಿಬ್ಬಂದಿಯನ್ನು ಪೊಲೀಸರು ಕೂಲಂಕಷ ವಿಚಾರಣೆಗೆ ಒಳಪಡಿಸಿದಾಗ ಸಿಕ್ಕಿಬಿದ್ದ ಜವಾನ ತಪ್ಪೋಪ್ಪಿಕೊಂಡ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

Facebook Comments

Sri Raghav

Admin