ಬೆಂಗಳೂರಲ್ಲಿ ಸುರಿದ ಮಾರಿ ಮಳೆ ಸೃಷ್ಟಿಸಿದ ಅವಾಂತರಗಳ ಚಿತ್ರಗಳು ಇಲ್ಲಿವೆ ನೋಡಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.10-ರಾತ್ರಿಯಿಡೀ ಬಿಟ್ಟು ಬಿಡದೆ ಸುರಿದ ಮಹಾಮಳೆಗೆ ಮಹಾನಗರ ತತ್ತರಿಸಿಹೋಗಿದೆ. ಹಲವಾರು ಕೆರೆಗಳ ಕೋಡಿ ಒಡೆದಿವೆ. ವೃಷಭಾವತಿ ಮತ್ತಿತರ ಕಣಿವೆಗಳು ತುಂಬಿ ಹರಿಯುತ್ತಿರುವ ಪರಿಣಾಮ ನಗರದ ಬಹುತೇಕ ರಸ್ತೆಗಳು ಕೆರೆಗಳಂತಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಎದುರಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ, ಎಸ್‍ಡಿಆರ್‍ಎಫ್ ತುಕಡಿಗಳು ಹಾಗೂ ಪಾಲಿಕೆ ಸಿಬ್ಬಂದಿ ಸಕಾಲಕ್ಕೆ ಕಾರ್ಯಾಚರಣೆಗಿಳಿಯದಿದ್ದರೆ ರೋಗಿಗಳು ಸೇರಿದಂತೆ ಬಸ್ ಪ್ರಯಾಣಿಕರ ಪ್ರಾಣಕ್ಕೆ ಕುತ್ತು ಬರುವ ಸಾಧ್ಯತೆಗಳಿತ್ತು.
ಸುತ್ತಮುತ್ತಲ ಗ್ರಾಮಾಂತರ ಪ್ರದೇಶಗಳಾದ ನೆಲಮಂಗಲ, ಚಿಕ್ಕಬಳ್ಳಾಪುರ, ಮಾಗಡಿ, ದೇವನಹಳ್ಳಿ ಹಾಗೂ ತುಮಕೂರು ಜಿಲ್ಲೆಯ ವಿವಿಧೆಡೆ ಸುರಿದ ಧಾರಾಕಾರ ಮಳೆಗೆ ಕೆರೆ-ಕುಂಟೆಗಳು ತುಂಬಿ ಹರಿಯುತ್ತಿವೆ.

Mayor  03

ರಾಜಧಾನಿಯಲ್ಲಂತೂ ಹಲವಾರು ಕೆರೆಗಳ ಕೋಡಿ ಒಡೆದು, ರಸ್ತೆಗಳೆಲ್ಲಾ ನದಿಗಳಾಗಿ ಪರಿವರ್ತನೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಕೆಲ ಬಡಾವಣೆಗಳು ಮತ್ತು ಅಪಾರ್ಟ್‍ಮೆಂಟ್‍ಗಳು ಜಲಾವೃತಗೊಂಡಿವೆ. ರಾತ್ರಿ ಒಂದು ಗಂಟೆ ಸುಮಾರಿಗೆ ಆರಂಭವಾದ ಮಳೆ, ಬೆಳಗಿನ ಜಾವದವರೆಗೂ ಎಡಬಿಡದೆ ಸುರಿದ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯ ಆರ್.ವಿ.ಕಾಲೇಜು ಸಮೀಪದ ವೃಷಭಾವತಿ ತುಂಬಿ ಹರಿದು ರಸ್ತೆಗಳಲ್ಲಿ ಆಳುದ್ದ ನೀರು ನಿಂತು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು.

PUR_0038ಕೆಂಗೇರಿ ಸಮೀಪದ ದುಬಾಸಿಪಾಳ್ಯ ಹಾಗೂ ಕೊಮ್ಮಘಟ್ಟ ಕೆರೆಗಳ ಕೋಡಿ ಒಡೆದು ನೀರು ಹೊರಬಂದ ಹಿನ್ನೆಲೆಯಲ್ಲಿ ಆ ಭಾಗದ ರಸ್ತೆಗಳೆಲ್ಲಾ ನದಿಗಳಾಗಿ ಪರಿವರ್ತನೆಗೊಂಡಿವೆ. ಮೈಸೂರು ಕಡೆ ಸಂಚರಿಸುತ್ತಿದ್ದ ಬಸ್ಸೊಂದು ಜಲಾವೃತಗೊಂಡ ಹಿನ್ನೆಲೆಯಲ್ಲಿ 36ಕ್ಕೂ ಹೆಚ್ಚು ಪ್ರಯಾಣಿಕರು ಬಸ್ಸಿನಲ್ಲೇ ಸಾವು-ಬದುಕಿನ ನಡುವೆ ಹೋರಾಟ ನಡೆಸುವ ಸನ್ನಿವೇಶ ಸೃಷ್ಟಿಯಾಗಿತ್ತು. ಲಾರಿ, ಮತ್ತಿತರ ವಾಹನಗಳೂ ರಸ್ತೆಯಲ್ಲಿ ಕೆಟ್ಟು ನಿಂತಿದ್ದವು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸಪಟ್ಟು ಬಸ್‍ನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಬೋಟ್ ಮೂಲಕ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು.

PUR_0053

ಹೆಬ್ಬಾಳ ಸಮೀಪದ ಜನನಿಬಿಡ ಸಂಜಯ್‍ನಗರ ಮುಖ್ಯರಸ್ತೆಯಲ್ಲಿ ಬೃಹದಾಕಾರದ ಮರವೊಂದು ನೆಲಕ್ಕುರುಳಿದೆ. ರಾತ್ರಿ ಮರ ಬಿದ್ದ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಒಂದು ವೇಳೆ ಬೆಳಗಿನ ಜಾವ ಮರ ಉರುಳಿದ್ದರೆ, ಭಾರೀ ಅನಾಹುತ ಎದುರಾಗುವ ಸಾಧ್ಯತೆ ಇತ್ತು.
ಘಟನಾ ಸ್ಥಳಕ್ಕೆ ಆಗಮಿಸಿದ ಬಿಬಿಎಂಪಿ ಅರಣ್ಯ ಘಟಕದ ಸಿಬ್ಬಂದಿ ಹರಸಾಹಸಪಟ್ಟು ಉರುಳಿಬಿದ್ದ ಮರ ತೆರವುಗೊಳಿಸುವಲ್ಲಿ ಯಶಸ್ವಿಯಾದರು.
ದೊಡ್ಡಬಿದರಕಲ್ಲು ವಾರ್ಡ್‍ನಲ್ಲಿ ಮೋರಿ, ಚರಂಡಿಗಳು ತುಂಬಿ ಹರಿದ ಹಿನ್ನೆಲೆಯಲ್ಲಿ ಇಡೀ ಗ್ರಾಮವೇ ಜಲಾವೃತಗೊಂಡಿತ್ತು. ಸ್ಥಳೀಯರು ರಾತ್ರಿಯಿಡೀ ಜಾಗರಣೆ ನಡೆಸಿ ಮನೆಗೆ ನುಗ್ಗಿದ ನೀರು ಹೊರಹಾಕುವ ಕಾರ್ಯದಲ್ಲಿ ತೊಡಗಿದ್ದರು. PUR_0007

ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಗ್ಗಲೀಪುರ ಸರ್ಕಾರಿ ಆಸ್ಪತ್ರೆಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ 30ಕ್ಕೂ ಹೆಚ್ಚು ರೋಗಿಗಳು ಪರದಾಡುವಂತಾಯಿತು. ವೈದ್ಯರ ಮುನ್ನೆಚ್ಚರಿಕೆ ಕ್ರಮದಿಂದ ಸ್ಥಳಕ್ಕೆ ಆಗಮಿಸಿದ ಎಸ್‍ಡಿಆರ್‍ಎಫ್ ಸಿಬ್ಬಂದಿಗಳು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಕಗ್ಗಲೀಪುರ ಸುತ್ತಮುತ್ತಲ ಬಹುತೇಕ ಗ್ರಾಮಗಳು ಜಲಾವೃತಗೊಂಡಿದ್ದು, ಸ್ಥಳೀಯರು ಮನೆಯಿಂದ ಹೊರಬರಲು ಸಾಧ್ಯವಾಗದೆ ಪರಿತಪಿಸುತ್ತಾ ಸ್ಥಳೀಯ ಆಡಳಿತದ ಕಾರ್ಯವೈಖರಿಗೆ ಹಿಡಿಶಾಪ ಹಾಕುತ್ತಿದ್ದಾರೆ. WhatsApp Image 2017-09-10 at 12.10.30 PM WhatsApp Image 2017-09-10 at 10.56.39 AM WhatsApp Image 2017-09-10 at 10.56.33 AM WhatsApp Image 2017-09-10 at 10.56.26 AM WhatsApp Image 2017-09-10 at 10.56.25 AM WhatsApp Image 2017-09-10 at 10.10.44 AM WhatsApp Image 2017-09-10 at 10.07.11 AM IMG-20170910-WA0156 IMG-20170910-WA0146 IMG-20170910-WA0144 IMG-20170910-WA0137 IMG-20170910-WA0138 IMG-20170910-WA0135

Facebook Comments

Sri Raghav

Admin