ಜಾರ್ಜ್ ರಾಜೀನಾಮೆಗೆ ರಾಜ್ಯಾದ್ಯಂತ ಬಿಜೆಪಿ ಹೋರಾಟ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa--01

ಬೆಂಗಳೂರು, ಸೆ.11- ಡಿವೈಎಸ್‍ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಸ್ಥಾನದಲ್ಲಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಇದೇ 16ರಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಸತ್ಯಾಗ್ರಹ ನಡೆಸಲಿದೆ.
ಸೆ.16ರಂದು ನಡೆಯಲಿರುವ ಸತ್ಯಾಗ್ರಹದಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ಸಚಿವ ಜಾರ್ಜ್ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನನ್ನ ಆತ್ಮಹತ್ಯೆಗೆ ಅಂದಿನ ಗೃಹ ಸಚಿವ ಕೆ.ಜೆ.ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದ ಪ್ರಣವ್ ಮೊಹಂತಿ ಹಾಗೂ ಎ.ಎನ್.ಪ್ರಸಾದ್ ಕಾರಣ ಎಂದು ಗಣಪತಿ ಹೇಳಿದ್ದರು.

ಸೆ.16ರಂದು ನಡೆಯಲಿರುವ ಸತ್ಯಾಗ್ರಹದಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ಸಚಿವ ಜಾರ್ಜ್ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ನನ್ನ ಆತ್ಮಹತ್ಯೆಗೆ ಅಂದಿನ ಗೃಹ ಸಚಿವ ಕೆ.ಜೆ.ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದ ಪ್ರಣವ್ ಮೊಹಂತಿ ಹಾಗೂ ಎ.ಎನ್.ಪ್ರಸಾದ್ ಕಾರಣ ಎಂದು ಗಣಪತಿ ಹೇಳಿದ್ದರು.

ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿ ಒಂದು ವಾರವಾದರೂ ಇದುವರೆಗೂ ಅವರಿಂದ ರಾಜೀನಾಮೆ ಪಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಗಳನ್ನು ರಕ್ಷಿಸಲು ಮುಂದಾಗಿದ್ದಾರೆ. ಈಗಾಗಲೇ ಸಿಬಿಐ ತನಿಖೆಗೆ ಆದೇಶಿಸಿದ್ದರೂ ಸಿಐಡಿ ಈಗಲೂ ತನಿಖೆಯನ್ನು ಮುಂದುವರೆಸಿದೆ. ಇದು ದಾಖಲೆಗಳನ್ನು ನಾಶಪಡಿಸುವ ಕುತಂತ್ರವೆಂದು ಆರೋಪಿಸಿದರು.
ನ್ಯಾಯಾಲಯ ಜಾರ್ಜ್ ಅವರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದರಿಂದ ನೆಪಮಾತ್ರಕ್ಕೆ ರಾಜೀನಾಮೆ ಪಡೆದು ಪುನಃ ಎರಡು ತಿಂಗಳಲ್ಲೇ ಸಂಪುಟಕ್ಕೆ ತೆಗೆದುಕೊಳ್ಳಲಾಯಿತು. ನೈತಿಕ ಹೊಣೆ ಹೊತ್ತು ಜಾರ್ಜ್ ಅವರು ರಾಜೀನಾಮೆ ನೀಡದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಯಡಿಯೂರಪ್ಪ ಎಚ್ಚರಿಸಿದರು.

ಸರ್ಕಾರ ವಿಫಲ:

ನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿದು ಸಾವಿರಾರು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ಕಡೆ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಾಗಲಿ, ಸಚಿವರಾಗಲಿ ಜನರ ಸಮಸ್ಯೆಗಳನ್ನು ಆಲಿಸಲು ಮುಂದಾಗದಿರುವುದು ದುರದೃಷ್ಟಕರ ಎಂದರು. ಬೆಂಗಳೂರಿನಲ್ಲಿ ರಾಜಕಾಲುವೆ ಹೂಳೆತ್ತೆವ ಹಾಗೂ ರಾಜಕಾಲುವೆ ನಿರ್ವಹಣೆಗೆ ಸಾವಿರಾರು ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಜಾರ್ಜ್ ಹೇಳಿಕೊಳ್ಳುತ್ತಾರೆ. ಈ ಸಂಬಂಧ ಯಾವುದೇ ಕೆಲಸಗಳಾಗಿಲ್ಲ. ಈ ಹಣ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದರು.

ಇದೇ 17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಮಳೆಯ ಅವಾಂತರಕ್ಕೆ ಸೂರಿ ಕಳೆದುಕೊಂಡಿರುವ 2ಸಾವಿರ ಕುಟುಂಬಗಳಿಗೆ ಅಕ್ಕಿ ವಿತರಣೆ ಮಾಡುವುದಾಗಿ ಇದೇ ವೇಳೆ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಸದ ಪಿ.ಸಿ.ಮೋಹನ್, ಶಾಸಕರಾದ ವಿಜಯ್‍ಕುಮಾರ್, ನಾರಾಯಣ್, ಲಕ್ಷ್ಮಣ್‍ಸವದಿ, ಮುನಿರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Facebook Comments

Sri Raghav

Admin