6ನೆ ದಿನಕ್ಕೆ ಕಾಲಿಟ್ಟ ವಿಧಾನಪರಿಷತ್ ಸದಸ್ಯರ ಧರಣಿ

Parishat

ಬೆಂಗಳೂರು, ಸೆ.11- ಶಿಕ್ಷಣ ಕ್ಷೇತ್ರದ ಸಮಸ್ಯೆ ಹಾಗೂ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ವಿಧಾನಪರಿಷತ್ ಸದಸ್ಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಇಂದು 6ನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಸೌಧ ಮತ್ತು ವಿಕಾಸೌಧದ ನಡುವೆ ಇರುವ ಮಹಾತ್ಮಾಗಾಂಧೀಜಿ ಪ್ರತಿಮೆ ಮುಂಭಾಗದಲ್ಲಿ ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಮಾಜಿ ಸಚಿವ ಬಸವರಾಜಹೊರಟ್ಟಿ, ವಿಧಾನಪರಿಷತ್ ಸದಸ್ಯರಾದ ಅರುಣ್‍ಶಹಪುರ, ಚೌಡರೆಡ್ಡಿ ತೂಪಲ್ಲಿ, ರಮೇಶ್‍ಬಾಬು, ಹನುಮಂತ ನಿರಾಣಿ, ರಾಮಚಂದ್ರೇಗೌಡ, ಶ್ರೀಕಂಠೇಗೌಡ, ಶಂಕನೂರು ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.  ಧರಣಿ ಸ್ಥಳದಲ್ಲಿಯೇ ವಿಧಾನಪರಿಷತ್ ಸದಸ್ಯರು ಶಿಕ್ಷಕರ ಸಮಸ್ಯೆ ಕುರಿತು ದುಂಡು ಮೇಜಿನ ಸಭೆ ನಡೆಸಿ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಬಸವರಾಜಹೊರಟ್ಟಿ, ಕಳೆದ ಆರು ದಿನಗಳಿಂದ ವಿಧಾನಪರಿಷತ್ ಸದಸ್ಯರು ಧರಣಿ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಶಿಕ್ಷಕರ ಸಮಸ್ಯೆ ಬಗೆಹರಿಸುವ ವಿಶ್ವಾಸ ಕೂಡ ದೊರೆತಿಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.
ಶಿಕ್ಷಣ ಕ್ಷೇತ್ರದ ಸಮಸ್ಯೆ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.15ರಂದು ಸಭೆ ಕರೆದಿದ್ದಾರೆ ಎಂದ ಅವರು, ತುರ್ತು ಸಭೆ ಕರೆದು ಸಮಸ್ಯೆ ಬಗೆಹರಿಸುವ ಇಚ್ಚಾಸಕ್ತಿ ತೋರಿಸಲಿಲ್ಲ ಎಂದು ಟೀಕಿಸಿದರು.

Facebook Comments

Sri Raghav

Admin