ಅವ್ಯವಹಾರದ ಆರೋಪ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Teacher--v01

ಚಿತ್ರದುರ್ಗ, ಸೆ.12- ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಣ ಕಾಲ್ಮೂರು ತಾಲೂಕು ರಾಂಪುರದ ಅಕ್ಕಮಹಾದೇವಿ ಬಡಾವಣೆ ನಿವಾಸಿ ತಿಪ್ಪೀರಮ್ಮ (46) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ದೇವಸಂದ್ರ ಗ್ರಾಮದ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಿಯಾಗಿದ್ದ ತಿಪ್ಪೀರಮ್ಮ ತಮ್ಮ ವಿರುದ್ಧದ ಅವ್ಯವಹಾರದ ಆರೋಪ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.

ವಿದ್ಯಾರ್ಥಿಗಳ ಶೂ ಖರೀದಿಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ಎಸ್‍ಡಿಎಂಸಿ ಸದಸ್ಯ ಹಾಗೂ ಸಹ ಶಿಕ್ಷಕರು ಕಿರುಕುಳ ನೀಡುತ್ತಿದ್ದಾರೆಂದು ಪತಿ ಪಾತಣ್ಣ ಜತೆ ಹೇಳಿಕೊಂಡಿದ್ದರು ಎನ್ನಲಾಗಿದೆ. ಪ್ರತಿನಿತ್ಯ ಶಾಲೆಗೆ ತೆರಳಿದ ಕೂಡಲೇ ವಿನಾಕಾರಣ ಕಿರುಕುಳ ನೀಡುತ್ತಿದ್ದುದರಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪತಿ ರಾಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin