ಬಿಬಿಎಂಪಿಯಲ್ಲಿ ಮೈತ್ರಿ ಕುರಿತು ಗೌಡರ ಜೊತೆ ರಾಮಲಿಂಗಾರೆಡ್ಡಿ ಮಾತುಕತೆ

ಈ ಸುದ್ದಿಯನ್ನು ಶೇರ್ ಮಾಡಿ

BB-Deveg

ಬೆಂಗಳೂರು, ಸೆ.12- ಬಿಬಿಎಂಪಿಯಲ್ಲಿ ಜೆಡಿಎಸ್ ಜತೆ ಮೈತ್ರಿ ಮುಂದುವರಿಸುವ ಸಂಬಂಧ ಗೃಹ ಸಚಿವ ರಾಮಲಿಂಗಾರೆಡ್ಡಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ಇಂದು ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ಕೆಪಿಸಿಸಿ ಖಜಾಂಚಿ ಕೃಷ್ಣಂರಾಜು ಸೇರಿದಂತೆ ಹಲವರೊಂದಿಗೆ ಬಿಬಿಎಂಪಿ ಮೈತ್ರಿ ಕುರಿತು ದೇವೇಗೌಡರೊಂದಿಗೆ ಮಾತುಕತೆ ನಡೆಸಲಾಯಿತು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿಯವರು, ಜಾತ್ಯತೀತ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿರುವ ದೇವೇಗೌಡರು ಕಾಂಗ್ರೆಸ್ ಜತೆ ಮೈತ್ರಿಗೆ ಒಪ್ಪುತ್ತಾರೆ ಎಂಬ ವಿಶ್ವಾಸ ನಮಗಿದೆ. ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಕುಮಾರಸ್ವಾಮಿ ಹಾಗೂ ಕುಪೇಂದ್ರರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.ಗೌರಿ ಲಂಕೇಶ್ ಹತ್ಯೆ ಆರೋಪಿಗಳು ಇನ್ನೂ ಸಿಕ್ಕಿಲ್ಲ. ಆದರೆ, ಶೀಘ್ರದಲ್ಲೇ ಅವರನ್ನು ಬಂಧಿಸುತ್ತೇವೆ ಎಂದು ಹೇಳಿದರು.

Facebook Comments

Sri Raghav

Admin