ಮಕ್ಕಳ ಮೇಲೆ ಲೈಂಗಿಕ ದುರಾಚಾರ : ದೆಹಲಿಯಲ್ಲಿ ಉನ್ನತಮಟ್ಟದ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

Girl-Rape

ನವದೆಹಲಿ, ಸೆ.12- ದೇಶದ ವಿವಿಧೆಡೆ ಶಾಲೆಗಳಲ್ಲಿ ಮಕ್ಕಳ ಮೇಲೆ ಹೆಚ್ಚುತ್ತಿರುವ ಲೈಂಗಿಕ ದುರಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ನಾಳೆ ರಾಜಧಾನಿ ದೆಹಲಿಯಲ್ಲಿ ಉನ್ನತಮಟ್ಟದ ಸಭೆ ಕರೆದಿದೆ. ಈ ಮಹತ್ವದ ಸಭೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆಗಾಗಿ ಕೆಲವು ಪ್ರಮುಖ ಮಾರ್ಗಸೂಚಿಗಳ ಅನುಷ್ಠಾನ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ.  ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಹಾಗೂ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ಪ್ರಕಾಶ್ ಜಾವ್ಡೇಕರ್ ಈ ಸಭೆಯನ್ನು ಕರೆದಿದ್ದಾರೆ ಎಂದು ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹರಿಯಾಣದ ಗುರುಗ್ರಾಮದ ರಯಾನ್ ಇಂಟರ್‍ನ್ಯಾಷನಲ್ ಸ್ಕೂಲ್‍ನ ವಿದ್ಯಾರ್ಥಿ ಪ್ರದ್ಯುಮ್ನ ಹತ್ಯೆ ಪ್ರಕರಣದಲ್ಲಿ ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಗೊಳಿಸಿದ ಬೆನ್ನಲ್ಲೇ ನಾಳೆ ನಡೆಯಲಿರುವ ಸಭೆ ಪ್ರಾಮುಖ್ಯತೆ ಪಡೆದುಕೊಂಡಿದೆ. ಉನ್ನತ ಮಟ್ಟದ ಸಭೆಯಲ್ಲಿ ಎನ್‍ಸಿಪಿಸಿಆರ್, ಸಿಬಿಎಸ್‍ಇ, ಎನ್‍ಸಿಇಆರ್‍ಟಿ, ಕೇಂದ್ರೀಯ ವಿದ್ಯಾಲಯ ಸಂಘಟನೆಯ ಉನ್ನತಾಧಿಕಾರಿಗಳು ಭಾಗವಹಿಸಲಿದ್ದಾರೆ.

Facebook Comments

Sri Raghav

Admin