ಮಹಾರಾಷ್ಟ್ರದ ಥಾಣೆಯಲ್ಲಿ ಭಾರೀ ಮಳೆಗೆ ಮರ ಬಿದ್ದು ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Thane--01

ಥಾಣೆ, ಸೆ.12-ಭಾರೀ ಮಳೆಯಿಂದಾಗಿ ದೊಡ್ಡ ಮರವೊಂದು ಉರುಳಿ ಬಿದ್ದು ಇಬ್ಬರು ಮೃತಪಟ್ಟು, 9 ಮಂದಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. ಧಾರಾಕಾರ ಮಳೆಯಿಂದ ರಕ್ಷಣೆ ಪಡೆಯಲು ಥಾಣೆಯ ಭೀವಂಡಿ ಉಪನಗರದ ನಾರ್ಪೋಲಿ ಪ್ರದೇಶದಲ್ಲಿನ ಆಟೋಮೊಬೈಲ್ ಗ್ಯಾರೇಜ್ ಒಂದರ ಬಳಿ ನಿಂತಿದ್ದ ಜನರ ಗುಂಪಿನ ಮೇಲೆ ಭಾರೀ ಮರವೊಂದು ಹಠಾತ್ ಉರುಳಿತು. ಈ ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, 9 ಮಂದಿ ಗಾಯಗೊಂಡರು ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Facebook Comments

Sri Raghav

Admin