ಗೌರಿ ಲಂಕೇಶ್ ಹಂತಕರ ಸುಳಿವು ಸಿಕ್ಕಿದೆ..!

ಈ ಸುದ್ದಿಯನ್ನು ಶೇರ್ ಮಾಡಿ

Gauri-Laneksh-Murder

ಬೆಂಗಳೂರು, ಸೆ.13- ಪತ್ರಕರ್ತೆ ಗೌರಿಲಂಕೇಶ್ ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳ ಸುಳಿವು ಲಭ್ಯವಾಗಿದ್ದು, ಮಾಧ್ಯಮಗಳ ಮುಂದೆ ಬಹಿರಂಗ ಪಡಿಸಿದರೆ ಹಂತಕರು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. : ವಿಧಾನಸೌಧದ ಮುಂಭಾಗ ಭಾರತದಲ್ಲಿ ಅತಿ ಉದ್ದವಾದ ಐರಾವತ ಡೈಮಂಡ್ ಕ್ಲಾಸ್ ಬಸ್‍ಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗೌರಿ ಹತ್ಯೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‍ಐಟಿ) ಈಗಾಗಲೇ ತನಿಖೆಯನ್ನು ಆರಂಭಿಸಿದೆ. ಈ ಸಂದರ್ಭದಲ್ಲಿ ಸಿಕ್ಕಿರುವ ಸುಳಿವುಗಳ ಬಗ್ಗೆ ಬಹಿರಂಗಪಡಿ ಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಲವು ಗೌಪ್ಯ ಮಾಹಿತಿಗಳನ್ನು ತನಿಖೆ ದೃಷ್ಟಿಯಿಂದ ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದರೆ ಹಂತಕರು ತಪ್ಪಿಸಿಕೊಳ್ಳಲಿದ್ದಾರೆ. ಎಸ್‍ಐಟಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ತಮಗಿದೆ ಎಂದರು.

ಭದ್ರತೆ ಕೇಳಿರಲಿಲ್ಲ:

ಗೌರಿ ಲಂಕೇಶ್ ನನ್ನನ್ನು ಹಲವು ಬಾರಿ ಭೇಟಿ ಮಾಡಿದ್ದರು. ಯಾವ ಸಂದರ್ಭದಲ್ಲೂ ಕೂಡ ಭದ್ರತೆ ಕೇಳಿರಲಿಲ್ಲ. ತಮಗೆ ನಕ್ಸಲೀಯರಿಂದಾಗಲಿ ಇಲ್ಲವೇ ಬೇರೆ ಯಾವುದೇ ವ್ಯಕ್ತಿಗಳಿಂದ ಜೀವ ಬೆದರಿಕೆ ಇರುವ ಬಗ್ಗೆ ಅವರು ಎಂದೂ ಕೂಡ ಹೇಳಿರಲಿಲ್ಲ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.
ಒಂದು ವೇಳೆ ಸಮಾಜಘಾತುಕ ಶಕ್ತಿಗಳಿಂದ ಬೆದರಿಕೆ ಬಂದಿದ್ದರೆ ಸರ್ಕಾರ ಸೂಕ್ತ ಭದ್ರತೆ ಒದಗಿಸುತ್ತಿತ್ತು. ಪ್ರತಿಯೊಬ್ಬರನ್ನೂ ರಕ್ಷಣೆ ಮಾಡುವುದು ಸರ್ಕಾರದ ಆದ್ಯ ಕರ್ತವ್ಯ. ಬುದ್ದಿ ಜೀವಿಗಳಿರಲಿ, ಪ್ರಗತಿಪರರಿರಲಿ, ಯಾರೇ ಇರಲಿ ಅವರಿಗೆ ಸೂಕ್ತ ರಕ್ಷಣೆ ನೀಡುತ್ತೇವೆ. ಬಿಜೆಪಿ ಈ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ ಎಂದು ಅವರು ಆಕ್ಷೇಪಿಸಿದರು.

Facebook Comments

Sri Raghav

Admin