ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ ಸಿಎಂ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

CM-siddaramai-----01

ಬೆಂಗಳೂರು. ಸೆ.13 :  ಬೆಂಗಳೂರು ನಗರದ ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಮುಖ್ಯಮಂತ್ರಿ ಅವರು ಮೊದಲು ಜೆ.ಸಿ. ರಸ್ತೆ ಕುಂಬಾರ ಗುಂಡಿಯ ದೊಡ್ಡನಾಲೆಯ ಹೂಳು ತೆಗೆಯುವ  ಕಾಮಗಾರಿಯನ್ನು ವೀಕ್ಷಿಸಿದರು.  ನಂತರ ಶಾಂತಿನಗರದ ಬಿ.ಎಂ.ಟಿ.ಸಿ. ವರ್ಕ್‍ಶಾಪ್ ಆವರಣದಲ್ಲಿ ಮಳೆ ನೀರು ತುಂಬಿ ಉಂಟಾಗುವ ಸಮಸ್ಯೆಗೆ ಪ್ರತ್ಯೇಕ ಮಳೆನೀರು ಚರಂಡಿ ನಿರ್ಮಿಸಲು 15 ಕೋಟಿ ರೂ. ವೆಚ್ಚದಲ್ಲಿ ರೂಪಿಸಿರುವ ಯೋಜನೆ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜೊತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಗೃಹ ಸಚಿವ ರಾಮಲಿಂಗಾರೆಡ್ಡಿ, ನಗರಾಭಿವೃದ್ಧಿ ಹಾಗೂ ಹಜ್ ಸಚಿವ ಆರ್. ರೋಷನ್‍ಬೇಗ್, ಸಾರಿಗೆ ಸಚಿವ ಎಸ್.ಎಂ. ರೇವಣ್ಣ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ವಿ. ದೇವರಾಜ್, ಬೆಂಗಳೂರು ಮಹಾನಗರ ಪಾಲಿಕೆ ಮೇಯರ್  ಶ್ರೀಮತಿ ಜಿ. ಪದ್ಮಾವತಿ, ಬಿ.ಬಿ.ಎಂ.ಪಿ. ಆಯುಕ್ತ ಮಂಜುನಾಥ ಪ್ರಸಾದ್, ಬಿ.ಡಿ.ಎ. ಆಯುಕ್ತ ರಾಕೇಶ್ ಸಿಂಗ್ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಸೋಮಶೇಖರ್, ಬಿ.ಎ. ಬಸವರಾಜು ಸೇರಿದಂತೆ ಅನೇಕ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

Facebook Comments

Sri Raghav

Admin