ಸುಪ್ರೀಂನಲ್ಲಿ ‘ಕಾವೇರಿ’ : ಕರ್ನಾಟಕ-ತಮಿಳುನಾಡು ವಾದ ಮಂಡನೆ

ಈ ಸುದ್ದಿಯನ್ನು ಶೇರ್ ಮಾಡಿ

Cauvery-Supreme--Court

ನವದೆಹಲಿ, ಸೆ.18-ಕರ್ನಾಟಕ ಮತ್ತು ತಮಿಳನಾಡು ನಡುವೆ ಶತಮಾನದಿಂದಲೂ ಉದ್ಭವಿಸಿರುವ ಕಾವೇರಿ ಜಲ ವಿವಾದ ಇತ್ಯರ್ಥಕ್ಕಾಗಿ ಸುಪ್ರೀಂಕೋರ್ಟ್‍ನಲ್ಲಿ ಇಂದಿನಿಂದ ಮತ್ತೆ ವಿಚಾರಣೆ ಮುಂದುವರಿದಿದೆ. ಉಭಯ ರಾಜ್ಯಗಳು ಇಂದು ತನ್ನ ವಾದ-ಪ್ರತಿವಾದಗಳನ್ನು ಮಂಡಿಸಿವೆ.
ಕಾವೇರಿ ಜಲ ವಿವಾದ ನ್ಯಾಯಮಂಡಳಿ (ಸಿಡಬ್ಲ್ಯುಡಿಟಿ) 2007ರಲ್ಲಿ ನೀಡಿದ ಅಂತಿಮ ತೀರ್ಪಿನ ವಿರುದ್ಧ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಿದ್ದು, ಜುಲೈ 11ರಿಂದ ಅಂತಿಮ ವಿಚಾರಣೆ ಆರಂಭಿಸಿದೆ.

ಆಗಿನ ನ್ಯಾಯಮೂರ್ತಿ ದೀಪಕ್ ಮಿಶ್ರಾ(ಈಗ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ) ನೇತೃತ್ವದ ಪೀಠವು ಈ ಹಿಂದೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿ ಮುಂದಿನ ಆದೇಶದವರೆಗೆಊ ತಮಿಳುನಾಡಿಗೆ ಪ್ರತಿದಿನ 2,000 ಕ್ಯೂಸೆಕ್ಸ್ ನೀರು ಹರಿಸುವಂತೆ ತಿಳಿಸಿದ್ದರು. ಇಂದು ಮುಂದುವರಿದ ವಿಚಾರಣೆ ವೇಳೆ ತಮಿಳುನಾಡು ಪರ ವಕೀಲರು ಕಾವೇರಿ ಜಲಾನಯ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಕೆಆರ್‍ಎಸ್ ಜಲಾಶಯದ ನೀರಿ ಮಟ್ಟದಲ್ಲಿ ಏರಿಕೆಯಾಗಿದೆ. ಆದ್ದರಿಂದ ರಾಜ್ಯ ಮತ್ತಷ್ಟು ನೀರು ಹರಿಸಲು ನಿರ್ದೇಶನ ನೀಡಬೇಕೆಂದು ಕೋರಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕದ ವಕೀಲರು ಕಳೆದ ಮೂರು ವರ್ಷಗಳಿಂದ ಮುಂಗಾರು ಮಳೆ ವೈಫಲ್ಯದಿಂದ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿದೆ. ಮಳೆಯಾಗಿದ್ದರೂ, ನಿರೀಕ್ಷಿತ ಮಟ್ಟದಲ್ಲಿ ಜಲಾಶಯ ಭರ್ತಿಯಾಗಿಲ್ಲ. ಹೀಗಾಗಿ ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಸಮರ್ಥ ಪ್ರತಿವಾದ ಮಂಡಿಸಿದರು. ಎರಡೂ ರಾಜ್ಯಗಳ ವಕೀಲರ ವಾದ-ಪ್ರತಿವಾದಗಳನ್ನು ಪೀಠ ಆಲಿಸಿತು.

ಎರಡೂ ರಾಜ್ಯಗಳ ನಡುವೆ ಕಾವೇರಿ ಜಲ ವಿವಾದದ ವೇಳೆ ಉಂಟಾಗಿರುವ ಭಾರೀ ನಷ್ಟಕ್ಕಾಗಿ ಪರಿಹಾರ ನೀಡಬೇಕೆಂದು ಕೋರಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಈ ವರ್ಷ ಜನವರಿಯಲ್ಲಿ ವಜಾಗೊಳಿಸಿತ್ತು.  ಜನವರಿ 9ರಂದು ತಮಿಳುನಾಡು ಸರ್ಕಾರವು ಸರ್ವೋಚ್ಚ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿ ರಾಜ್ಯಕ್ಕೆ ಕರ್ನಾಟಕ ಸಮರ್ಪಕವಾಗಿ ನೀರು ಹರಿಸದ ಕಾರಣ ಆ ರಾಜ್ಯದಿಂದ 2,480 ಕೋಟಿ ರೂ.ಗಳ ಪರಿಹಾರ ಒದಗಿಸಿಕೊಂಡುವಂತೆ ಕೋರಿತ್ತು.

ಕಳೆದ ವರ್ಷ ಡಿಸೆಂಬರ್ 9ರಂದು ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಕಾವೇರಿ ನ್ಯಾಯಾಧಿಕರಣದ ಅಂತಿಮ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗಳನ್ನು ವಿಚಾರಣೆಗಾಗಿ ಅಂಗೀಕರಿಸಿತ್ತು. ಸಂವಿಧಾನಿಕವಾಗಿ ಪ್ರದತ್ತವಾದ ಅಧಿಕಾರ ಮತ್ತು ಹಕ್ಕನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದು ಅಂತಿಮ ವಿಚಾರಣೆ ಆರಂಭಿಸಿದೆ.

Facebook Comments

Sri Raghav

Admin