ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್, ಪ್ರಯಾಣಿಕರಿಗೆ ಗಾಯ

Tumakuru--01

ತುಮಕೂರು, ಸೆ.15- ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದ ಪರಿಣಾಮ 5 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧುಗಿರಿ ತಾಲ್ಲೂಕಿನ ಕೆಳಗಳ ಪಾಳ್ಯ ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗಡಿನ ತಡೆಗೋಡೆಯನ್ನು ದಾಟಿ ಜಮೀನಿಗೆ ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್‍ನಲ್ಲಿ 8 ಜನ ಪ್ರಯಾಣಿಕರಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ.

Tumakuru--02

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಗಂಭೀರವಾಗಿ ಗಾಯಗೊಂಡವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧುಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Tumakuru--03

Tumakuru--05

Facebook Comments

Sri Raghav

Admin