ಶಿಕ್ಷಣ ಕ್ಷೇತ್ರದ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ವಿಫಲ

ಈ ಸುದ್ದಿಯನ್ನು ಶೇರ್ ಮಾಡಿ

Ashok

ಬೆಂಗಳೂರು,ಸೆ.15-ಉಪನ್ಯಾಸಕರ ಹಾಗೂ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳನ್ನು ಪರಿಹರಿಸದ ಕಾಂಗ್ರೆಸ್ ಸರ್ಕಾರ ಬೀದರ್, ಚಾಮರಾಜನಗರದಲ್ಲಿರುವ ಜನರ ಸಮಸ್ಯೆಗಳನ್ನು ಬಗೆಹರಿಸುವುದೇ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.  ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ವಿಧಾನಪರಿಷತ್ ಸದಸ್ಯರು ಕಳೆದ 10 ದಿನಗಳಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಎಂಎಲ್‍ಸಿಗಳು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಇದುವರೆಗೂ ಸಮಸ್ಯೆ ಬಗೆಹರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂತಹ ಮುಖ್ಯವಾದ ಸಮಸ್ಯೆಗಳನ್ನು ಬಗೆಹರಿಸದೆ ಸರ್ಕಾರ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವುದೇ ಎಂದು ಲೇವಡಿ ಮಾಡಿದರು.
ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರಿ ಶಾಲೆಗಳ ಉಪನ್ಯಾಸಕರು, ಪ್ರಾಂಶುಪಾಲರ ಸಮಸ್ಯೆಗಳನ್ನು ಸಚಿವರ ಮಟ್ಟದಲ್ಲೇ ಬಗೆಹರಿಸಬಹುದಿತ್ತು. ಆದರೆ ಬಗೆಹರಿಸಲು ಸಚಿವರು ವಿಫಲರಾಗಿದ್ದಾರೆ. ಇಲಾಖೆಗೆ ಇಂತಹ ಸಚಿವರು ಬೇಕಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಸಿಎಂ ಸಿದ್ದರಾಮಯ್ಯ ಅವರು ಇಂದು ಸಭೆ ಕರೆದಿದ್ದಾರೆ. ಅಲ್ಲಿಯಾದರೂ ಈ ಸಮಸ್ಯೆಗೆ ಪರಿಹಾರ ಸಿಗಲಿ ಎಂದು ಆಶಿಸಿದರು.

ನಿನ್ನೆ ಸಿಎಂ ಅವರು ಮೈಸೂರಿಗೆ ತೆರಳುತ್ತಿರುವ ಮಾರ್ಗಮಧ್ಯೆ ಮಂಡ್ಯದಲ್ಲಿ ರೈತರೊಬ್ಬರು ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೇ ವೇಳೆ ಸಾರ್ವಜನಿಕರು ರೈತರ ಮನೆಗೆ ಭೇಟಿ ನೀಡುವಂತೆ ಮನವಿ ಮಾಡಿದರೂ ಕೇಳಿಸಿಕೊಳ್ಳದೆ ಹೊರಟುಹೋದರು ಎಂದು ದೂರಿದರು.

Facebook Comments

Sri Raghav

Admin