ಪತಿ ಸಾಂಬಾರ್ ಚೆನ್ನಾಗಿಲ್ಲ ಎಂದಿದ್ದಕ್ಕೆ ನೇಣಿಗೆ ಕೊರಳೊಡ್ಡಿದ ಪತ್ನಿ

ಈ ಸುದ್ದಿಯನ್ನು ಶೇರ್ ಮಾಡಿ

Suicide-Hang-Girl
ಬೆಂಗಳೂರು, ಸೆ.16- ಪತಿಯ ವರ್ತನೆಯಿಂದ ಬೇಸತ್ತ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಪಿ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚೋಳೂರು ಪಾಳ್ಯದ ನಾಗಲಕ್ಷ್ಮಿ (45) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.  ಕೌಟುಂಬಿಕ ವಿಚಾರವಾಗಿ ಪತಿ ಶ್ರೀನಿವಾಸ್ ವಿನಾಕಾರಣ ಆಗಿಂದಾಗ್ಗೆ ಪತ್ನಿ ನಾಗಲಕ್ಷ್ಮಿ ಜತೆ ಜಗಳವಾಡುತ್ತಿದ್ದನು ಎನ್ನಲಾಗಿದೆ. ರಾತ್ರಿ ಊಟಕ್ಕೆ ಕುಳಿತಿದ್ದಾಗ ಸಾಂಬಾರ್ ಚೆನ್ನಾಗಿಲ್ಲ ಎಂದು ನಾಗಲಕ್ಷ್ಮಿಗೆ ನಿಂದಿಸಿದ್ದಾನೆ. ಇದರಿಂದ ಮನನೊಂದ ನಾಗಲಕ್ಷ್ಮಿ ತಡರಾತ್ರಿ ಮನೆಯಲ್ಲಿ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದ್ದಿ ತಿಳಿದ ಕೆಪಿ ಅಗ್ರಹಾರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.

ವ್ಯಕ್ತಿ ಆತ್ಮಹತ್ಯೆ:

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಪೈಪ್‍ಲೈನ್‍ನಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೋಳೂರುಪಾಳ್ಯದ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಾವಿಯಲ್ಲಿ ಈತನ ಶವ ಕಂಡು ಪೊಲೀಸರಿಗೆ ಸ್ಥಳೀಯರು ತಿಳಿಸಿದ್ದರು. ಸ್ಥಳಕ್ಕಾಗಮಿಸಿದ ಪೆÇಲೀಸರು ಶವವನ್ನು ಮೇಲೆತ್ತಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.  ಈ ಸಂಬಂಧ ಕೆಪಿ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin