ಹುಕ್ಕಾ ಬಾರ್ ನಡೆಸುತ್ತಿದ್ದ 11 ಮಂದಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

11-Arrested

ಬೆಂಗಳೂರು, ಸೆ.16- ಹುಕ್ಕ ಬಾರ್ ನಡೆಸುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು 11 ಮಂದಿಯನ್ನು ಬಂಧಿಸಿ 22,620ರೂ. ವಶಪಡಿಸಿಕೊಂಡಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆ ಸರಹದ್ದಿನ ಐಟಿಐ ಕಾಲೋನಿ, ನ್ಯೂ ಬಿಇಎಲ್ ರಸ್ತೆಯಲ್ಲಿನ ಅನ್ನಪೂರ್ಣ ಕಾಂಪ್ಲೆಕ್ಸ್‍ನ 3ನೆ ಮಹಡಿಯಲ್ಲಿನ ಸ್ಮೋಕೀಸ್ ಕೆಫ್‍ಯಲ್ಲಿ ಕಾನೂನು ಬಾಹಿರವಾಗಿ ಹುಕ್ಕ ಬಾರ್ ನಡೆಸುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಹುಕ್ಕ ಬಾರ್ ಮೇಲೆ ದಾಳಿ ಮಾಡಿ 11 ಮಂದಿಯನ್ನು ಬಂಧಿಸಿ 22,620ರೂ. ವಶಪಡಿಸಿಕೊಂಡಿದ್ದಾರೆ.

ದಾಳಿ ವೇಳೆ ಇಬ್ಬರು ಪರಾರಿಯಾಗಿದ್ದಾರೆ. ಈ ಕೆಫೆಯಲ್ಲಿ ಯಾವುದೇ ನಿಯಮಾವಳಿಗಳನ್ನು ಪಾಲಿಸದೆ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಹುಕ್ಕವನ್ನು ಸರಬರಾಜು ಮಾಡಿ ಮಾದಕ ವ್ಯಸನಿಗಳಾಗಿ ಪರಿವರ್ತಿತರಾಗಲು ದುಷ್ಪ್ರೇರಣೆ ಮಾಡುತ್ತಿದ್ದುದು ಕಂಡುಬಂದಿದೆ.ಆರೋಪಿಗಳ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin