ಒತ್ತಡಕ್ಕೆ ಮಣಿಯದೆ ಪೊಲೀಸರು ಕರ್ತವ್ಯ ನಿರ್ವಹಿಸಬೇಕು : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Cm-Police

ಬೆಂಗಳೂರು, ಸೆ.16- ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಕರ್ತವ್ಯವಾಗಿದ್ದು, ಸಮಾಜದಲ್ಲಿರುವ ಕಿಡಿಗೇಡಿಗಳು ಹಾಗೂ ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಕಿವಿಮಾತು ಹೇಳಿದರು. ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಪದಕ ಪರಸ್ಕøತ ಪೊಲೀಸ್ ಅಧಿಕಾರಿಗಳಿಗೆ ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಿಷ್ಟಾವಂತರಾಗಿ ಕರ್ತವ್ಯವಾಗಿ ನಿರ್ವಹಿಸುವುದರ ಜತೆಗೆ ತನಿಖೆಯಲ್ಲಿ ಗೌಪ್ಯತೆ ಕಾಪಾಡಬೇಕು ಎಂದು ಹೇಳಿದರು.

ಪೊಲೀಸರು ಯಾವುದೇ ಒತ್ತಡಗಳಿದ್ದರೂ ಪ್ರಾಮಾಣಿಕ, ದಕ್ಷತೆಯಿಂದ ಕರ್ತವ್ಯ ನಿರ್ವಹಿಸಬೇಕು. ಪೊಲೀಸರಿಗೆ ಯಾವುದೇ ಚಿಂತೆ ಇಲ್ಲದೆ ಇರುವ ವಾತಾವರಣ ನಿರ್ಮಾಣವಾಗಬೇಕು, ಪೊಲೀಸರು ಸಾರ್ವಜನಿಕರಿಗೆ ನಂಬಿ ಹಾಗೂ ವಿಶ್ವಾಸ ಬರುವಂತೆ ಕೆಲಸ ಮಾಡಬೇಕೆಂದು ಸಲಹೆ ನೀಡಿದರು. ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೆ ಪ್ರಾಮಾಣಿಕವಾಗಿ ಪೊಲೀ ಸರು ಕರ್ತವ್ಯ ನಿರ್ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

88 ಪೊಲೀಸ್ ಅಧಿಕಾರಿಗಳಿಗೆ ಪದಕ:

ರಾಜಭವನದ ಗಾಜಿನ ಮನೆಯಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ 88 ಪೊಲೀಸ್ ಅಧಿಕಾರಿಗಳಿಗೆ ರಾಜ್ಯಪಾಲ ವಿ.ಆರ್.ವಾಲಾ ಪ್ರದಾನ ಮಾಡಿದರು. ರಾಜ್ಯದ ಆಯ್ದ ಸಾಧಕ ಪೊಲೀಸರಿಗೆ ಹಮ್ಮಿಕೊಂಡಿದ್ದ ಪದಕ ಪ್ರದಾನ ಸಮಾರಂಭದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಪಾಲ್ಗೊಂಡಿದ್ದರು.

Facebook Comments

Sri Raghav

Admin