ಜೈಲುಗಳಲ್ಲಿ ಅಸ್ವಾಭಾವಿಕ ಸಾವುಗಳ ಕುರಿತು ಸುಪ್ರೀಂ ಕೋರ್ಟ್ ಕಳವಳ

ಈ ಸುದ್ದಿಯನ್ನು ಶೇರ್ ಮಾಡಿ

Supreme_Court_of_India_-_Retouched

ನವದೆಹಲಿ, ಸೆ.17-ದೇಶದ ವಿವಿಧ ಕಾರಾಗೃಹಗಳಲ್ಲಿ ಕೈದಿಗಳ ಅಸ್ವಾಭಾವಿಕ ಸಾವು ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಇದನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಗಳಿಗೆ ಸೂಚನೆ ನೀಡಿದೆ. 201-15ರ ನಡುವೆ ಹಾಗೂ ಆ ನಂತರ ಬಂದೀಖಾನೆಗಳಲ್ಲಿ ಅಸಹಜವಾಗಿ ಮೃತಪಟ್ಟ ಕೈದಿಗಳ ಕುಟುಂಬವನ್ನು ಗುರುತಿಸಲು ಹಾಗೂ ಸೂಕ್ತ ಪರಿಹಾರ ನೀಡಲು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ದಾಖಲಿಸಿಕೊಳ್ಳುವಂತೆಯೂ ಎಲ್ಲ ಹೈಕೋರ್ಟ್‍ಗಳಿಗೆ ಸರ್ವೋಚ್ಛ ನ್ಯಾಯಾಲಯ ನಿರ್ದೇಶನ ನೀಡಿದೆ.

ಜೈಲುಗಳಲ್ಲಿ ಸಂಭವಿಸುತ್ತಿರುವ ಅಸ್ವಾಭಾವಿಕ ಸಾವುಗಳನ್ನು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಪಿಐಎಲ್‍ನಲ್ಲಿ ಸೆರೆಮನೆಗಳಲ್ಲಿನ ದಯನೀಯ ಸ್ಥಿತಿಗತಿಗಳ ಬಗ್ಗೆಯೂ ಬೆಳಕು ಚೆಲ್ಲಲಾಗಿತ್ತು. ನ್ಯಾಯಮೂರ್ತಿಗಳಾದ ಮದನ್ ಬಿ. ಲೋಕೂರ್ ಮತ್ತು ದೀಪಕ್ ಗುಪ್ತಾ ಅವರನ್ನು ಒಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿ ಈ ಸೂಚನೆಗಳನ್ನು ಕೊಟ್ಟಿದೆ.  ನ್ಯಾಷನಲ್ ಕ್ರೈಮ್ ರೆಕಾಡ್ರ್ಸ್ ಬ್ಯೂರೋದ ದತ್ತಾಂಶ ಪ್ರಕಾರ 2012-15ರ ಅವಧಿಯಲ್ಲಿ ದೇಶಾದ್ಯಂತ ವಿವಿಧ ಕಾರಾಗೃಹಗಳಲ್ಲಿ 328 ಆತ್ಯಹತ್ಯೆಗಳೂ ಸೇರಿದಂತೆ 551 ಅಸ್ವಾಭಾವಿಕ ಸಾವುಗಳು ಸಂಭವಿಸಿವೆ.

Facebook Comments

Sri Raghav

Admin